ಯುದ್ದದ ಪರಿಣಾಮವಾಗಿ ಗ್ಯಾಸ್, ಇಂಧನ ಮತ್ತು ಅಡುಗೆ ಎಣ್ಣೆ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನರಿಗೆ ಇದೀಗ ಕುಡಿಯುವ ನೀರಿನ ಬಾಟಲಿಗಳ ದರ ಏರಿಕೆಯ ಬಿಸಿ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದೇ ಇದಕ್ಕೆ ಪ್ರಮುಖ ಕಾರಣವೆಂದು ತಿಳಿದುಬಂದಿದೆ.
ಪ್ಲಾಸ್ಟಿಕ್ ವಾಟರ್ ಬಾಟಲಿಗಳ ತಯಾರಿಕೆಗೆ ಅಗತ್ಯವಾದ ‘ಪಾಲಿಮರ್’ ಅನ್ನು ಕಚ್ಚಾ ತೈಲದಿಂದ ಉತ್ಪಾದಿಸಲಾಗುತ್ತದೆ. ಯುದ್ಧ ಪರಿಸ್ಥಿತಿಯಿಂದ ತೈಲದ ಬೆಲೆ ಗಗನಕ್ಕೇರಿರುವುದರಿಂದ, ಪ್ಲಾಸ್ಟಿಕ್ ಕಚ್ಚಾ ವಸ್ತುಗಳ ಬೆಲೆ ಶೇ.50ರಷ್ಟು ಏರಿಕೆಯಾಗಿ ಕಿಲೋಗೆ ₹170 ತಲುಪಿದೆ. ಜೊತೆಗೆ ಬಾಟಲಿ ಮೂಡಿಗಳು, ಲೇಬಲ್ ಮತ್ತು ಪ್ಯಾಕೇಜಿಂಗ್ ಬಾಕ್ಸ್‌ಗಳ ಬೆಲೆಯೂ ದ್ವಿಗುಣವಾಗಿದೆ.
ದೇಶದ ಪ್ರಮುಖ ನೀರಿನ ಬ್ರ್ಯಾಂಡ್‌ಗಳಾದ Bisleri, Parle Agro ಹಾಗೂ Clear ಸೇರಿದಂತೆ ಹಲವಾರು ಕಂಪನಿಗಳು ತಮ್ಮ ಉತ್ಪನ್ನಗಳ ದರವನ್ನು ಶೇ.8ರಿಂದ 11ರಷ್ಟು ಹೆಚ್ಚಿಸಿವೆ.ಬಿಸ್ಲರಿ ಕಂಪನಿಯ 1 ಲೀಟರ್ ಬಾಟಲಿಗಳ 12 ಪ್ಯಾಕ್ ಬೆಲೆ ₹216ರಿಂದ ₹240ಕ್ಕೆ ಏರಿಕೆಯಾಗಿದೆ. ಉತ್ಪಾದನಾ ವೆಚ್ಚ ಹಾಗೂ ಪ್ಯಾಕೇಜಿಂಗ್ ಸಾಮಗ್ರಿಗಳ ದರ ಏರಿಕೆಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.
ಇದಕ್ಕೂ ಮೊದಲು ಕೇಂದ್ರ ಸರ್ಕಾರ ನೀರಿನ ಬಾಟಲಿಗಳ ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.5ಕ್ಕೆ ಇಳಿಸಿದ್ದರಿಂದ ದರದಲ್ಲಿ ಇಳಿಕೆ ಕಂಡುಬಂದಿತ್ತು. ಆದರೆ ಇದೀಗ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದ ಆ ಪ್ರಯೋಜನ ಬಹುತೇಕ ನಷ್ಟವಾಗಿದೆ.ಭಾರತದಲ್ಲಿ ಶೇ.70ರಷ್ಟು ಅಂತರ್ಜಲ ಕಲುಷಿತಗೊಂಡಿರುವ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಕುಡಿಯುವ ನೀರಿಗಾಗಿ ಬಾಟಲಿಗಳನ್ನೇ ಅವಲಂಬಿಸಿದ್ದಾರೆ. ಬೇಸಿಗೆ ಕಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ದರ ಏರಿಕೆ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಯುದ್ಧ ಪರಿಸ್ಥಿತಿ ಮುಂದುವರಿದರೆ ಬೆಲೆಗಳು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








