Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 05 ರಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಚಿತ್ರದುರ್ಗ ಪ್ರವಾಸ

Facebook
Twitter
Telegram
WhatsApp

ಚಿತ್ರದುರ್ಗ ಜ. 04 :  ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಜ. 05 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಗೋವಿಂದ ಕಾರಜೋಳ ಅವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 01.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು.  ಮ. 3.25 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ವೀರಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಪಾಲ್ಗೊಳ್ಳುವರು.

ನಂತರ ಅನುಭವ ಮಂಟಪದಲ್ಲಿ ಎಸ್‍ಸಿ/ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು.  ನಂತರ ಶ್ರೀ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡುವರು.  ಸಂಜೆ 5.50 ಗಂಟೆಗೆ ಸಿರಿಗೆರೆಗೆ ತೆರಳಿ ಶ್ರೀ ತರಳಬಾಳು ಮಠಕ್ಕೆ ಭೇಟಿ ನೀಡುವರು.  ಸಚಿವರು ಅದೇ ದಿನ ಸಂಜೆ 6.30 ಗಂಟೆಗೆ ಬಾಗಲಕೋಟ ಜಿಲ್ಲೆ ಮುಧೋಳಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!