Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ

---Advertisement---

 

ಚಿತ್ರದುರ್ಗ. ಜುಲೈ04: ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರು ಇದೇ ಜುಲೈ 5ರಂದು ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮದನ್ವಯ ಜುಲೈ 05ರಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 12ಕ್ಕೆ ತರೀಕೆರೆ ಮಾರ್ಗ ಮಧ್ಯೆದಲ್ಲಿ ಭದ್ರಾ ಜಲಾಶಯ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಇನ್‍ಟೇಕ್ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 1ಕ್ಕೆ ಭದ್ರಾ ಜಲಾಯಶದಿಂದ ಹೊರಟು, ಮಧ್ಯಾಹ್ನ 1.30ಕ್ಕೆ ತರೀಕೆರೆ-ಕಡೂರು ಕೆರೆ ತುಂಬಿಸುವ ಯೋಜನೆಯ ಪಂಪ್ ಹೌಸ್-2 ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 2ಕ್ಕೆ ಕಡೂರು ಪಂಪ್‍ಹೌಸ್‍ನಿಂದ ಹೊರಟು ಮಧ್ಯಾಹ್ನ 2.30ಕ್ಕೆ ಅಜ್ಜಂಪುರಕ್ಕೆ ಆಗಮಿಸಿ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯಕಾಲುವೆ ವೈ-ಜಂಕ್ಷನ್ ಮತ್ತು ಚಿತ್ರದುರ್ಗ ಶಾಖಾ ಕಾಲುವೆ ಪ್ಯಾಕೇಜ್-4ರ ಬಾಟಲ್‍ನೆಕ್ಸ್ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗ ಶಾಖಾ ಕಾಲುವೆ ಹೊಸದುರ್ಗ ಮಾರ್ಗ ಗೋನೂರು ಅಕ್ವೆಡಕ್ಟ್‍ನಿಂದ ನಿರ್ಗಮಿಸಿ, ಸಂಜೆ 4.30ಕ್ಕೆ ಗೋನೂರು ಅಕ್ವೆಡಕ್ಟ್‍ಗೆ ಆಗಮಿಸಿ, ಚಿತ್ರದುರ್ಗ ಶಾಖಾ ಕಾಲುವೆಯ ಪ್ಯಾಕೇಜ್-11ರ ಕಾಮಗಾರಿ ವೀಕ್ಷಣೆ ಮಾಡುವರು. ಸಂಜೆ 5.30ಕ್ಕೆ ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನೆ ವಲಯ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ