Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಜಲಸಂಪನ್ಮೂಲ ಸಚಿವರ ಜಿಲ್ಲಾ ಪ್ರವಾಸ

---Advertisement---

 

ಚಿತ್ರದುರ್ಗ. ಸೆ.19: ರಾಜ್ಯ ಜಲಸಂಪನ್ಮೂಲ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇದೇ ಸೆಪ್ಟೆಂಬರ್ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿಂದ ಹೊರಟು, ಬೆಳಿಗ್ಗೆ 10ಕ್ಕೆ ಹಿರಿಯೂರು ತಾಲ್ಲೂಕು ಐಮಂಗಲಕ್ಕೆ ಆಗಮಿಸಿ, ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯಡಿ ಪ್ರಾಯೋಗಿಕವಾಗಿ ನೀರನ್ನು ಹರಿಸಿರುವ ಕೆರೆಗಳ ಪರಿವೀಕ್ಷಣೆ ಮಾಡುವರು.

ನಂತರ ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸಿ, ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿಯವರು ನೆರವೇರಿಸಲಿರುವ ಭದ್ರಾ ಮೇಲ್ದಂಡೆ ಯೋಜನೆಯ ಗಂಗಾ ಪೂಜೆ ಕಾರ್ಯಕ್ರಮದ ಪೂರ್ವಸಿದ್ಧತೆಯ ಪರಿವೀಕ್ಷಣೆ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಮಧ್ಯಾಹ್ನ 3ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಲಸಂಪನ್ಮೂಲ ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ  ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now