Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ 04 ಕೆರೆಗಳಲ್ಲಿ ಜಲಕ್ರೀಡೆಗೆ ಅನುಮತಿ : ಜಿಲ್ಲಾಧಿಕಾರಿ ಟಿ. ವೆಂಕಟೇಶ್

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಚಿತ್ರದುರ್ಗ ತಾಲ್ಲೂಕಿನ ಚಂದ್ರವಳ್ಳಿ ಕೆರೆ, ಮಲ್ಲಾಪುರ ಕೆರೆ, ಚಳ್ಳಕೆರೆ ತಾಲ್ಲೂಕಿನ ಕೆರೆಕಲ್ ಕೆರೆ, ಮೊಳಕಾಲ್ಮೂರು ತಾಲ್ಲೂಕು ರಂಗಯ್ಯನದುರ್ಗ ದಲ್ಲಿ ಸಾಹಸ ಪ್ರವಾಸೋದ್ಯಮ ಹಾಗೂ ಜಲಕ್ರೀಡೆಗಳನ್ನು ಕೈಗೊಳ್ಳಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಬಿವೃದ್ಧಿ ಪ್ರಾಧಿಕಾರವು ಕಳೆದ ವರ್ಷವೇ ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಂದ್ರವಳ್ಳಿ ಕೆರೆಯಲ್ಲಿ ಜಲಸಾಹಸ ಕ್ರೀಡೆಗಳಾದ ಕಯಾಕಿಂಗ್, ಕನೋಯಿಂಗ್, ವಿಂಡ್ ಸರ್ಫಿಂಗ್, ಜಿಟ್ ಸ್ಕೀಯಿಂಗ್ ವಾಟರ್ ಜಾರ್ಬಿಂಗ್ ಹಾಗೂ ಬೋಟಿಂಗ್ ಕೈಗೊಳ್ಳಲು ಸಣ್ಣ ನೀರಾವರಿ ಇಲಾಖೆ ಹಾಗೂ ನಗರಸಭೆಯು ನಿರಾಪೇಕ್ಷಣ ಪತ್ರ ನೀಡಿದೆ ಎಂದು ಪ್ರವಾಸೋದ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.  ಇದಕ್ಕೆ ಶೀಘ್ರ ಇದನ್ನು ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಭದ್ರಾ ಮೆಲ್ದಂಡೆ ಯೋಜನೆ ಕಾರ್ಯಪಾಲಕ ಅಭಿಯಂತರ ಚಂದ್ರಪ್ಪ ಬಾರಿಕರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಪ್ರವಾಸೋದ್ಯಮ, ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ, ರಾಜ್ಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...