ಬೆಂಗಳೂರು: ರಾಜ್ಯಗಳ ಕೃಷಿ, ತೋಟಗಾರಿಕೆ ಸಚಿವರ ರಾಷ್ಟ್ರೀಯ ಸಮ್ಮೇಳನಕ್ಕೆ ನಗರದ ಖಾಸಗಿ ಹೊಟೇಲಿನಲ್ಲಿ ಚಾಲನೆ ನೀಡಲಾಗಿದೆ. ಕೇಂದ್ರದ ಕೃಷಿ ಇಲಾಖೆ ಸಚಿವ ನರೇಂದ್ರ ಸಿಂಗ್ ತೋಮರ್ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರದ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಿಎಂ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ ಸಿ ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ, ಬೇರೆ ಬೇರೆ ರಾಜ್ಯಗಳ ಕೃಷಿ ಮತ್ತು ತೋಟಗಾರಿಕೆ ಸಚಿವರು ಉಪಸ್ಥಿತರಿದ್ದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಯೋಜನೆಗಳ ಬಗ್ಗೆ ಚರ್ಚೆ ನಡೆದಿದೆ.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಕರ್ನಾಟಕದಲ್ಲಿ ಕೃಷಿ, ತೋಟಗಾರಿಕೆ ಯೋಜನೆಗಳ ಪರಿಣಾಮಕಾರಿ ಜಾರಿ ಆಗ್ತಿದೆ. ರಾಜ್ಯ ಸರ್ಕಾರ ಹಲವು ಉತ್ತಮ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದೆ. ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸ್ಕಾಲರ್ಶಿಪ್ ಕೊಡುವ ರೈತ ವಿದ್ಯಾನಿಧಿ ಯೋಜನೆ. ದೇಶದಲ್ಲೇ ಮೊದಲ ಬಾರಿಗೆ ನಮ್ಮಲ್ಲಿ ಜಾರಿಯಾಗಿದೆ. ರಾಜ್ಯದಲ್ಲಿ ಸಧ್ಯದಲ್ಲೇ ಕ್ಷೀರ ಬ್ಯಾಂಕ್ ತೆರೆಯಲಿದ್ದೇವೆ. ನೀರಾವರಿ ಯೋಜನೆಗಳ ಜಾರಿಯಲ್ಲೂ ರಾಜ್ಯ ಮುಂದಿದೆ ಎಂದಿದ್ದಾರೆ.