ಸುದ್ದಿಒನ್, ಚಿತ್ರದುರ್ಗ, (ಅ.06) : ನೀವು ಯಾರನ್ನ ಬೇಕಾದರು ಬಂಧಿಸಿ ನಾವು ಜೈಲಿಗೆ ಹೋಗಲು ಸಿದ್ಧವಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯವಾಗಿ ನೀವು ಸದ್ಯ ಉಳಿದಿರುವುದಕ್ಕೆ ಕೊರೊನಾ ಹೆಮ್ಮಾರಿ ಕಾರಣವಾಗಿದೆ. ಈ ಹೆಮ್ಮಾರಿ ಇಲ್ಲವಾಗಿದ್ದರೆ ಈ ದೇಶದಲ್ಲಿ ಅಹಿಂಸಾತ್ಮಕ ಚಳುವಳಿ ನಡೆಯುತ್ತಿತ್ತು. ಕೊರೊನಾ ಕಾರಣಕ್ಕೆ ನಾವು ಶಾಂತಿ ರೀತಿಯಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಎಚ್ಚರಿಸಿದರು.
ನಮ್ಮ ಹೋರಾಟಕ್ಕೆ ಬೆಲೆ ಕೊಟ್ಟು ರೈತರ ಸಮಸ್ಯೆಗಳನ್ನ ಇತ್ಯರ್ಥ ಮಾಡಬೇಕು. ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿರುವ ಅಮಾನವೀಯ ಘಟನೆಗೆ ದೇಶದ ಜನರಲ್ಲಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಉತ್ತರಪ್ರದೇಶದಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ರಾಜಕಾರಣಿಗಳ ಮಕ್ಕಳು ರೈತರ ಮೇಲೆ ಜೀಪ್ ಹರಿಸಿ ಮೂಲಕ ಕೊಲೆ ಮಾಡಿದ್ದಾರೆ. ಕ್ರೂರ ಮನಸ್ಸಿನ ನೀವು ದೇಶವನ್ನು ಆಳಲಿಕ್ಕೆ ಯೋಗ್ಯರಾ ಎಂದು ಬಿಜೆಪಿಯವರನ್ನು ಪ್ರಶ್ನಿಸಿದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…