Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಡುಗೊಲ್ಲ ಮತ್ತು ಕುರುಬ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ನಮ್ಮ ವಿರೋಧವಿಲ್ಲ : ಡಾ.ಗೆರೆಗಲ್ ಪಾಪಯ್ಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ಕಾಡುಗೊಲ್ಲ ಮತ್ತು ಕುರುಬ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದನ್ನು ನಾವುಗಳು ವಿರೋಧಿಸುತ್ತಿಲ್ಲ. ಇದನ್ನು ವಿರೋಧಿಸುವಂತೆ ಪ್ರಚೋಧಿಸಿ ಜಾತಿ ಮತ್ತು ಪಂಗಡಗಳ ನಡುವೆ ಸಂಘರ್ಷ ಉಂಟು ಮಾಡುತ್ತಿರುವವರ ವಿರುದ್ದ ಎಚ್ಚರಿಕೆಯಿಂದ ಇರುವಂತೆ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಡಾ.ಗೆರೆಗಲ್ ಪಾಪಯ್ಯ ಮನವಿ ಮಾಡಿದರು.

ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ತಿಂಗಳ 18 ಹರಿಹರ ವಾಲ್ಮೀಕಿ ಗುರುಪೀಠದಲ್ಲಿ ನಡೆದ ಸಭೆಯಲ್ಲಿ ವಾಲ್ಮೀಕಿ ನಾಯಕ ಜಾತಿಗೆ ಮೇಲ್ವರ್ಗದ ಜಾತಿಗಳನ್ನು ಸೇರ್ಪಡೆಗೊಳಿಸುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವಂತೆ ಮ್ಯಾಸ ನಾಯಕ ಬುಡಕಟ್ಟು ಜನರನ್ನು ಕುರುಬರ ವಿರುದ್ದ ಎತ್ತಿ ಕಟ್ಟುವ ಕುತಂತ್ರ ರೂಪಿಸಿ ಮ್ಯಾಸ ನಾಯಕ, ತಳವಾರ, ಪರಿವಾರ ಇವರುಗಳನ್ನು ಹೋರಾಟಕ್ಕೆ ಇಳಿಯುವಂತೆ ಗೊಂದಲ ಸೃಷ್ಠಿ ಮಾಡುತ್ತಿರುವುದಕ್ಕೆ ಕಿವಿಗೊಡಬಾರದೆಂದು ಮ್ಯಾಸ ನಾಯಕರನ್ನು ಎಚ್ಚರಿಸಿದರು.

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಕುರುಬ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಲು ಅರ್ಹತೆ ಹೊಂದಿದೆಯೆಂಬ ವರದಿ ನೀಡಿದೆ.
1976 ರಲ್ಲಿ ಮ್ಯಾಸ ನಾಯಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗಿದೆ. ಎಸ್.ಟಿ.ಮೀಸಲಾತಿ ಯಾರ ಮನೆ/ಮಠದ ಸ್ವತ್ತಲ್ಲ. ವಾಲ್ಮೀಕಿ ಗುರುಪೀಠದವರು ಎಸ್ಟಿ. ಮೀಸಲಾತಿಯನ್ನು ಗುತ್ತಿಗೆ ಪಡೆದ ರೀತಿ ವರ್ತಿಸುವಂತಿದೆ. ಸಂವಿಧಾನದಡಿ ಆಯಾ ವರ್ಗದ ಜಾತಿ ಜನಾಂಗದವರಿಗೆ ಅರ್ಹತೆ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಮಾನ ಹಕ್ಕಿದೆ. ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಕುರುಬರು ಸೇರ್ಪಡೆಯಾಗಲು ವಿಶಿಷ್ಟವಾದ ಬುಡಕಟ್ಟು ಲಕ್ಷಣಗಳಿದೆಯೋ ಇಲ್ಲವೋ ಎನ್ನುವುದನ್ನು ರಾಜ್ಯ ಸರ್ಕಾರಗಳು ವರದಿ ತಯಾರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತದೆ. ಆಗ ಸಂಸತ್‍ನಲ್ಲಿ ಚರ್ಚಿಸಿ ಅಂತಹ ಜಾತಿಗಳನ್ನು ಪರಿಶಿಷ್ಟ ಪಂಗಕ್ಕೆ ಸೇರಿಸುತ್ತದೆನ್ನುವ ಸತ್ಯ ಗೊತ್ತಿದ್ದರೂ ವಿನಾ ಕಾರಣ ಗೊಂದಲ ಸೃಷ್ಟಿಸಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಬಾರದೆಂದರು.

ಮ್ಯಾಸ ಬೇಡ ಬುಡಕಟ್ಟು ಸಂಸ್ಕøತಿ ಸಂರಕ್ಷಣಾ ಸಮಿತಿ ಉಪಾಧ್ಯಕ್ಷ ಸಿ.ಎಸ್.ಜೋಗೇಶ್, ಕಾರ್ಯದರ್ಶಿ ದೊಡ್ಡಮನಿ ಪ್ರಸಾದ್, ಮಲ್ಲೇಶ್ ಪಿ.ಜಾಲಿಕಟ್ಟೆ, ಎಂ.ಕೆ.ಬೋಸಪ್ಪ, ಚಂದ್ರಣ್ಣ, ಗಿರೀಶ್, ಕೆ.ಬಿ.ಓಬಣ್ಣ, ಮಂಜುನಾಥ, ಡಾ.ಅನ್ನಪೂರ್ಣ ಜೋಗೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now