ಶಿವಮೊಗ್ಗ: ಕಳೆದ ಬಾರಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಹೋದವರನ್ನು ಸೂರ್, ಚಂದ್ರ ಇರುವ ತನಕ ಕಾಂಗ್ರೆಸ್ ಮತ್ತೆ ಕರೆಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಯಾವಾಗಲೂ ಹೇಳುತ್ತಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ತೊರೆದವರನ್ನು ಪುನಃ ಪಕ್ಷಕ್ಕೆ ಆಹ್ವಾನ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವ ಶಿವರಾಂ ಹೆಬ್ಬಾರ್, ಯಾರೆಲ್ಲಾ ಬರಬೇಕು ಎಂದು ಹೇಳುವ ಅಧಿಕಾರ ಅವರಿಗುಂಟು. ಯಾರೆಲ್ಲಾ ಹೋಗಬೇಕು ಎಂದು ಹೇಳುವ ಅಧಿಕಾರ ನಮಗುಂಟು. ಕಾಂಗ್ರೆಸ್ ಗೆ ಹೋಗುವುದಕ್ಕೆ ನಾವೇನು ಅರ್ಜಿ ಹಾಕಿಲ್ಲ. ಹಾಕುವ ಅವಶ್ಯಕತೆಯೂ ನಮಗಿಲ್ಲ ಎಂದಿದ್ದಾರೆ.
ಈಗಾಗಲೇ ಹಲವು ರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ಕೂಡ ಹತ್ತಿರವಾಗುತ್ತಿದೆ. ಹೀಗಾಗಿ ಪಕ್ಷವನ್ನು ಬಲವರ್ಧನೆ ಮಾಡುವುದು ಮುಖ್ಯವಾಗಿದೆ. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ಪಣ ತೊಟ್ಟಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…