ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಅವರ ಬಜೆಟ್ ನಂತರ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಮಾಡಿರುವ ಸಾಲದ ಬಗ್ಗೆ ಮಾತನ್ನಾಡಿದರು. ಆದರೆ ಸಿದ್ದರಾಮಯ್ಯ ಅವರು ಈ ಸಾಲದ ಬಗ್ಗೆ ಅಲ್ಲಗಳೆದಿದ್ದಾರೆ. ಅದಕ್ಕೆ ಒಂದಿಷ್ಟು ಸ್ಪಷ್ಟನೆಯನ್ನು ನೀಡಿದ್ದಾರೆ.
ಅಭಿವೃದ್ಧಿ ಕೆಲಸಗಳಿಗೆ ಸಾಲ ಮಾಡುವುದು ಅನಿವಾರ್ಯ. ಅದನವನ ಇತಿಮಿತಿಯಲ್ಲಿಯೇ ಸಾಲ ಮಾಡಲಾಗಿರುವುದು. ಕೇಂದ್ರದ ಸಾಲ 212 ಲಕ್ಷ ಕೋಟಿ ರೂಪಾಯಿವೆ ಏರುವ ಅಂದಾಜು ಇದೆ. ಅದು ಜಿಡಿಪಿಯ ಶೇಕಡ 55ಕ್ಕಿಂತ ಹೆಚ್ಚು. ತಾವು ಪರಿಮಿತಿಯಲ್ಲೇ ಸಾಲ ಮಾಡಿದ್ದೇವೆ. ನಾವೂ ಅಧಿಕಾರಕ್ಕೆ ಬಂದಾಗ ಸಾಲ 5.54 ಲಕ್ಷ ಕೋಟಿ ರೂಪಾಯಿ ಸಾಲ ಇತ್ತು. ಆದರೆ ಈಗ ಸಾಲ 8.14 ಲಕ್ಚ ಕೋಟಿ ರೂಪಾಯಿ ಆಗುತ್ತದೆ.
ಫಿಸ್ಕಲ್ ರೆಸ್ಪನ್ಸಿಬಲ್ ಆ್ಯಕ್ಟ್ ಪ್ರಕಾರ ವಿತ್ತೀಯ ಕೊರತೆ ಜಿಡಿಪಿಯ ಶೇಕಡ 3ರ ಒಳಗೆ ಇರಬೇಕು. ಸಾಲವು ಶೇಕಡ 25ರ ಒಳಗೆ ಇರಬೇಕು. ಕರ್ನಾಟಕದ ಜಿಡಿಇಪಿ ಮುಂದಿನ ವರ್ಷ 33 ಲಕ್ಷ ಕೋಟಿ ರೂಪಾಯಿ ಆಗುತ್ತದೆ. ಹೀಗಾಗಿ ಕಾಯ್ದೆ ವಿಧಿಸಿರುವ ಮಿತಿಯೊಳಗೆ ಸಾಲವನ್ನು ಮಾಡಲಾಗಿದೆ. ಅತ್ತ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮಾಡುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಆದರೆ, ಕರ್ನಾಟಕಕ್ಕೆ ಜಿಎಸ್ಟಿ ಪಾಲು ನ್ಯಾಯಯುತವಾಗಿ ಸಿಕ್ಕಿಲ್ಲ. ಈ ವರ್ಷ ನಮಗೆ ಜಿಎಸ್ಟಿ ಹಂಚಿಕೆಯಲ್ಲಿ 10,000 ಕೋಟಿ ರೂ ಕೊರತೆಯಾಗಿದೆ. ಮುಂದಿನ ವರ್ಷ 15,000 ರೂಪಾಯಿ ಕಡಿಮೆ ಆಗುವ ಅಂದಾಜು ಇದೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











