Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ : ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮೇ.23 :  ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ ಪೂರ್ಣಿಮಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಗೌತಮ ಬುದ್ಧನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ವೇಳೆ ಮಾತನಾಡಿದ ಚಿಂತಕ ಬರಹಗಾರ ಮೈತ್ರಿ ದ್ಯಾಮಣ್ಣ ಗೌತಮ ಬುದ್ಧನ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತವಾಗಿರುತ್ತವೆ ಅವುಗಳನ್ನು ಅಳವಡಿಸಿಕೊಂಡು ಜೀವನ ಸಾಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಬುದ್ಧನ ಅಷ್ಟಾಂಗ ಮಾರ್ಗಗಳನ್ನು ಅನುಸರಿಸಿದಾಗ ಮಾತ್ರ ಉತ್ತಮ ಜೀವನ ಕಂಡುಕೊಳ್ಳಲು ಸಾಧ್ಯ ಯುವ ಜನತೆ ಬುದ್ಧ ಪ್ರಜ್ಞೆಯನ್ನು ಅಳವಡಿಸಿಕೊಂಡಾಗ ಮಾತ್ರ ಬುದ್ಧನ ಸತ್ಸಂಗ ಮಾರ್ಗವನ್ನು ಅನುಸರಿಸುವ ಮೂಲಕ ಬೆಳಕಿನೆಡೆಗೆ ಸಾಗೋಣ ಎಂದು ತಿಳಿಸಿದರು.

ಸಾಹಿತಿ ಹಾಗೂ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಮಾಜವು ಕಲುಷಿತಗೊಳ್ಳುತ್ತಿದ್ದು ವಿಕೃತಿ ಮನಸ್ಥಿತಿಯನ್ನು ಹೊಂದುತ್ತಿದೆ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಹೀನ ಮನಸ್ಥಿತಿಯವರಿಗೆ ಬುದ್ಧ ಪ್ರಜ್ಞೆಯ ಅವಶ್ಯಕತೆ ಇದೆ ಬುದ್ದನ ನುಡಿಗಳು ಇಂದಿಗೂ ಪ್ರಸ್ತುತವಾಗಿದ್ದು ದ್ವೇಷ ಭಾವನೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಅಷ್ಟಾಂಗ ಮಾರ್ಗಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜವನ್ನು ಶುದ್ಧೀಕರಣ ಗೊಳಿಸಲು ಸಾಧ್ಯ ಎಂದು ತಿಳಿಸಿದರು.

ಪ್ರೋ.ಸಿ ಕೆ ಮಹೇಶ್ವರಪ್ಪ ಮಾತಾಡಿ ಬುದ್ಧನ ಬಗ್ಗೆ ಮಾತನಾಡುವ ಬದಲು ಅವನ ನೀತಿಗಳನ್ನು ಅಳವಡಿಸಿಕೊಂಡು ಬಾಳುವುದು ಎಲ್ಲರ ಧರ್ಮವಾಗಿದೆ ಹಿಂದೂ ಧರ್ಮದಿಂದ ಮಾದಿಗ ಸಮುದಾಯ ಹೊರಬಂದು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ ಮಾದಿಗ ಸಮುದಾಯವು ರಾಜ್ಯದಲ್ಲಿ ಅತಿ ಹೆಚ್ಚಿನ ಜನಸಂಖ್ಯೆಯಲ್ಲಿದ್ದರೂ ಸಹ ನಮ್ಮ ಮೂಲಭೂತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಮಾದಿಗ ಸಮುದಾಯ ಬೌದ್ಧ ಧರ್ಮದ ಕಡೆಗೆ ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕಿದೆ ಹಿಂದೂ ಧರ್ಮದಲ್ಲಿ ಬುದ್ಧನ ಪಂಚಶೀಲ ತತ್ವಗಳಿಗೆ ಬೆಲೆ ಇಲ್ಲದಂತಾಗಿದ್ದು ನಮ್ಮ ಸಮುದಾಯವು ಹಿಂದೂ ಧರ್ಮದಲ್ಲಿ ಇರುವವರೆಗೂ ಅಭಿವೃದ್ಧಿ ಕಾಣಲು ಸಾಧ್ಯವಾಗುವುದಿಲ್ಲ ಹಾಗಾಗಿ ಮಾದಿಗ ಸಮುದಾಯ ಮುಂದಿನ ದಿನಗಳಲ್ಲಿ ಬೌದ್ಧ ಧರ್ಮಕ್ಕೆ ಮರಳುವ ಬಗ್ಗೆ ಚಿಂತಿಸಬೇಕಿದೆ ಎಂದು ತಿಳಿಸಿದರು.

ಇದೇ ವೇಳೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಎನ್ ಪಲ್ಲವಿ ಅಮಿತ್ ಸ್ಪೂರ್ತಿ ಸುಜಿತ್ ರವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು

ಕಾರ್ಯಕ್ರಮದಲ್ಲಿ ಸಾಹಿತಿ ಮೂಗೂರು ತೇಜ ನಿವೃತ್ತ ತಹಸಿಲ್ದಾರ್ ನಾಗರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ನಾಗರಾಜ್ ಮಲ್ಲಿಕಾರ್ಜುನ ಸಿಕೆ ಮಹೇಶ್ ಕುಮಾರ್ ಚಿಕ್ಕಣ್ಣ ತಿಪ್ಪೇಸ್ವಾಮಿ ಜಯಣ್ಣ ಶಿವಣ್ಣ ಪಿಡಿಒ ಇನಾಯಕ್ ಪಾಷಾ ರೈತ ಮುಖಂಡ ದಯಾನಂದ ಮೂರ್ತಿ ಹನುಮಂತಪ್ಪ ಆರ್ ದ್ಯಾಮರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...