ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಶಿವಮೊಗ್ಗ: ಜಿಲ್ಲೆಯಲ್ಲಿಯೇ ಏರ್ಪೋರ್ಟ್ ಇದೆ. ಆದರೂ ಅಲ್ಲಿ ಇಳಿಯದೆ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಾರೆ, ಅಲ್ಲಿಂದ ಹುಬ್ಬಳ್ಳಿಗೆ ಹೋಗಿ ಬರಬೇಕಿದೆ. ಇದೇ ಸಮಸ್ಯೆಯ ಬಗ್ಗೆ ಇಂದು ಸಂಸದ ಬಿವೈ ರಾಘವೇಂದ್ರ ಧ್ವನಿ ಎತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ನಿರ್ವಹಣೆಗೆ ಕೊಟ್ಟು ದೊಡ್ಡ ತಪ್ಪು ಮಾಡಿಬಿಟ್ಟೆ. ನಿನ್ನೆ ವಿಮಾನವೂ ಶಿವಮೊಗ್ಗದಲ್ಲಿ ನಿಲ್ಲದೆ ಹುಬ್ಬಳ್ಳಿಗೆ ತೆರಳಿತ್ತು. ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ರಸ್ತೆ ಮಾರ್ಗವಾಗಿ ಬಂದೆ. ನಮ್ಮೂರಿನಲ್ಲಿಯೇ ವಿಮಾನ ನಿಲ್ದಾಣವಿದ್ದರೂ ಬೇರೊಂದು ಊರಿಗೆ ಹೋಗಿ ಬರಬೇಕಾದ ದುಸ್ಥಿತಿ ನಮ್ಮದು. ತಂದೆ ಮುಖ್ಯಮಂತ್ರಿ ಆಗಿದ್ದಾಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿಬಿಟ್ಟೆ. ಇದು ನಾನು ಮಾಡಿದ ದೊಡ್ಡ ತಪ್ಪು ಎಂದು ಈಗ ಅನಿಸಲಿ ಶುರುವಾಗಿದೆ. ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ವಹಿಸಿದ್ದರೆ ಎಲ್ಲಾ ಕೆಲಸಗಳು ಸುಗಮವಾಗುತ್ತಿತ್ತು.
ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ಪೂರಕವಾದ ಉಪಕರಣಗಳನ್ನು ತರಿಸಿ ಮೂರು ತಿಂಗಳಾಗಿದೆ. ಇವುಗಳ ಅಳವಡಿಕೆಗೆ ಎರಡರಿಂದ ಮೂರು ಕೋಟಿ ರೂಪಾಯಿ ಅಗತ್ಯವಿದೆ. ಟೆಂಡರ್ ಕರೆಯಲು ವಿಳಂಬವಾಗುತ್ತಿದೆ. ಇದರ ಬದಲು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದರೆ ಟೆಂಡರ್ ರಹಿತವಾಗಿ ಕಾಮಗಾರಿ ಪೂರ್ಣಗೊಳಿಸುತ್ತಿದ್ದರು. ಸರ್ಕಾರ ಒಂದು ಕೋಟಿ ರೂಪಾಯಿ ಕೊಡಲು ಸಂಪುಟ ಸಭೆ ನಡೆಸಬೇಕು ಎನ್ನುತ್ತಿದೆ. ರಾಜ್ಯ ಸರ್ಕಾರದಿಂದ ಹಣ ಕೊಡಲೂ ವಿಳಂಬವಾಗುತ್ತಿದೆ. ಕೆಲಸ ಆರಂಭಿಸಲೂ ತಡವಾಗುತ್ತಿದೆ. ಇದರಿಂದ ನಮಗೆ ದೊರೆಯಬೇಕಿದ್ದ ಅವಕಾಶ ಬೇರೆಯವರ ಪಾಲಾಗುತ್ತಿದೆ. ಸರ್ಕಾರ ಕೂಡಲೇ ನೈಟ್ ಲ್ಯಾಂಡಿಂಗ್ ಉಪಕರಣಗಳನ್ನು ಅಳವಡಿಸಿ ಕೊಡಬೇಕು. ಆ ಬಳಿಕ ದೆಹಲಿಯಲ್ಲಿ ಚರ್ಚೆ ನಡೆಸಿ ಮತ್ತಷ್ಟು ವಿಮಾನಗಳನ್ನು ತರಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್