ದಾವಣಗೆರೆ: ಕಳೆದ ಕೆಲವು ದಿನಗಳಿಂದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದೀಗ ಮತ್ತೆ ವಾಗ್ದಾಳಿ ನಡೆಸಿದ್ದು, ಹಿಂದೆಲ್ಲಾ ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿದ್ದೆವು. ಈಗ ಆ ಪರಿಸ್ಥಿತಿ ನಮ್ಮ ಪಕ್ಷಕ್ಕೇನೆ ಬಂದಿದೆ ಎಂದು ಬೇಸರ ಹೊರ ಹಾಕಿದ್ದಾರೆ.
ನಾನು ಬಿಜೆಪಿ ಬಿಡುತ್ತೇನೆ ಎಂದು ಎಲ್ಲೂ ಹೇಳಿಲ್ಲ. ರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತಾರೆಂದು ಬಿಜೆಪಿ ಪಾರ್ಟಿಯಿಂದ ಅಫ್ರಚಾರ ಮಾಡುತ್ತಿದ್ದಾರೆ. ನಾನು ಕ್ಷೇತ್ರದ ಸಮಸ್ಯೆಗಾಗಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದೇನೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಪಕ್ಷ ನನಗೆ ತಾಯಿ ಸಮಾನ. ಪಕ್ಷ ಬಿಡುವ ಯೋಚನೆಯೇ ಇಲ್ಲ ಎಂದಿದ್ದಾರೆ.
ಇನ್ನು ಪಕ್ಷದ ನಡೆಯಿಂದಾಗಿ ಯಡಿಯೂರಪ್ಪ ಅವರಿಗೆ ಬೇಸರವಾಗಿದೆ ಎಂದ ರೇಣುಕಾಚಾರ್ಯ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮುಕ್ತಾಯವಾಗಿದೆ. ಆದ್ರೆ ಇನ್ನೂ ಕೂಡ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದು ಯಡಿಯೂರಪ್ಪ ಅವರ ಮನಸ್ಸಿಗೆ ಬೇಸರವಾಗಿದೆ. ಇನ್ನು ಕೆಲವರು ಪತ್ರಿಕಾ ಹೇಳಿಕೆಯ ಟೈಗರ್ ಗಳಾಗಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















