ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಲೆ ಇದೆ. ಆದರೆ ಇದರ ನಡುವೆಯೂ ಮತ್ತೆ 18 ದಿನಗಳ ಕಾಲ ನೀರು ಬಿಡುವಂತೆಯೇ ಪ್ರಾಧಿಕಾರ ಸೂಚನೆ ನೀಡಿದೆ. ಈ ಆದೇಶ ಈಗ ಕರ್ನಾಟಕ ಜನತೆಯನ್ನು ಮತ್ತಷ್ಟು ಕೆರಳಿಸಿದೆ.
ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ್ದರೆ. ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿ, ದೇವರ ಬಳಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನೀರು ಸಮಿತಿಯ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ. ಕಾವೇರಿ ನೀರಿ ಪ್ರಾಧಿಕಾರ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯಕ್ಕೆ ನಮ್ಮ ಬಳಿಯೇ ನೀರು ಇಲ್ಲ. ಈ ವಿಚಾರದಲ್ಲಿ ಕಾನೂನು ತಜ್ಞರ ಬಳಿ ಸಲಹೆ ಪಡೆದಿದ್ದೇವೆ. ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ. ಆದರೆ ಕಾವೇರಿ ನದಿ ನೀರು ಹಂಚಿಕೆಯ ವಿಚಾರದಲ್ಲಿ ರಾಜೀಯಾಗಲ್ಲ ಎಂದೆ ಹೇಳಿದ್ದಾರೆ.
ಕಾವೇರಿ ನಮ್ಮದು. ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಹೀಗಿರುವಾಗ ಪ್ರತಿದಿನ ನೀರು ಬಿಟ್ಟರೆ ಮುಂದೆ ನಮ್ಮ ಗತಿ ಏನು ಎಂದು ರೈತರು ಆತಂಕಗೊಂಡಿದ್ದಾರೆ. ನಿನ್ನೆಯೆಲ್ಲಾ ಬೆಂಗಳೂರು ಬಂದ್ ಮಾಡಿ, ಶುಕ್ರವಾರ ಕರ್ನಾಟಕ ಬಂದ್ ಮಾಡಲು ಹೊರಟಿದ್ದಾರೆ.