Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿ ವಿಚಾರದಲ್ಲಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುತ್ತೇವೆ : ಸಿಎಂ ಸಿದ್ದರಾಮಯ್ಯ

---Advertisement---

 

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಲೆ ಇದೆ. ಆದರೆ ಇದರ ನಡುವೆಯೂ ಮತ್ತೆ 18 ದಿನಗಳ ಕಾಲ ನೀರು ಬಿಡುವಂತೆಯೇ ಪ್ರಾಧಿಕಾರ ಸೂಚನೆ ನೀಡಿದೆ. ಈ ಆದೇಶ ಈಗ ಕರ್ನಾಟಕ ಜನತೆಯನ್ನು ಮತ್ತಷ್ಟು ಕೆರಳಿಸಿದೆ.

ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ್ದರೆ. ಮಲೆ‌ಮಹದೇಶ್ವರ ಬೆಟ್ಟಕ್ಕೆ ಹೋಗಿ, ದೇವರ ಬಳಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನೀರು ಸಮಿತಿಯ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.

ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ. ಕಾವೇರಿ ನೀರಿ ಪ್ರಾಧಿಕಾರ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯಕ್ಕೆ ನಮ್ಮ ಬಳಿಯೇ ನೀರು ಇಲ್ಲ. ಈ ವಿಚಾರದಲ್ಲಿ ಕಾನೂನು ತಜ್ಞರ ಬಳಿ ಸಲಹೆ ಪಡೆದಿದ್ದೇವೆ. ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ. ಆದರೆ‌ ಕಾವೇರಿ ನದಿ ನೀರು ಹಂಚಿಕೆಯ ವಿಚಾರದಲ್ಲಿ ರಾಜೀಯಾಗಲ್ಲ ಎಂದೆ ಹೇಳಿದ್ದಾರೆ.

ಕಾವೇರಿ ನಮ್ಮದು.‌ ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಹೀಗಿರುವಾಗ ಪ್ರತಿದಿನ ನೀರು ಬಿಟ್ಟರೆ ಮುಂದೆ ನಮ್ಮ ಗತಿ ಏನು ಎಂದು ರೈತರು ಆತಂಕಗೊಂಡಿದ್ದಾರೆ. ನಿನ್ನೆಯೆಲ್ಲಾ ಬೆಂಗಳೂರು ಬಂದ್ ಮಾಡಿ, ಶುಕ್ರವಾರ ಕರ್ನಾಟಕ ಬಂದ್ ಮಾಡಲು ಹೊರಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...