Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಮಣ್ಣಿನಲ್ಲಿ ವೀರ ಮದಕರಿ ನಾಯಕರ ಸ್ಮಾರಕ ನಿರ್ಮಿಸುತ್ತೇವೆ : ಬಿಎಸ್ ವೈ `ಅಭಿಮಾನೋತ್ಸವ’ದಲ್ಲಿ ಅಮಿತ್ ಶಾ ಘೋಷಣೆ

---Advertisement---

ಸುದ್ದಿಒನ್,ಚಿತ್ರದುರ್ಗ,ಮೇ.09: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣ ಮತ್ತು ಜನಸೇವೆಯನ್ನು ಗೌರವಿಸುವ ಸಲುವಾಗಿ ಆಯೋಜಿಸಲಾಗಿದ್ದ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಅದ್ಧೂರಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಜೀವನಗಾಥೆ ಮತ್ತು ಸಾಧನೆಗಳ ಕುರಿತಾದ ಎರಡು ಪ್ರಮುಖ ಪುಸ್ತಕಗಳನ್ನು ಅಮಿತ್ ಶಾ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಹೋರಾಟದ ಬದುಕು ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಮದಕರಿ ನಾಯಕ ಸ್ಮಾರಕದ ಬಗ್ಗೆ ವಾಗ್ದಾನ

ಚಿತ್ರದುರ್ಗವು ರಾಜ ಮದಕರಿ ನಾಯಕನ ವೀರ ಭೂಮಿ, ಇತ್ತೀಚೆಗಷ್ಟೇ ಕೆಲವು ದಿನಗಳ ಹಿಂದೆ ಕೆಲವರು ವಿವಾದ ಮಾಡಿದರು. ನಾನು ಇಲ್ಲಿ ಸ್ಮಾರಕ ನಿರ್ಮಿಸುವ ಬಗ್ಗೆ ಮಾತನಾಡಿದ್ದೆ. ಆದರೆ ಸ್ಮಾರಕ ನಿರ್ಮಾಣವಾಗಿಲ್ಲ ಎಂದು ಆದರೆ ನಾನು ವಿಧಾನಸಭೆ ಚುನಾವಣೆ ವೇಳೆ ಈ ಮಾತು ಹೇಳಿದ್ದೆ. ಸರ್ಕಾರ ರಚನೆಯಾಗಿದ್ದು ಕಾಂಗ್ರೆಸ್ ಪಕ್ಷದ್ದು, ಆದರೆ ಚಿಂತಿಸಬೇಡಿ ಮೋದಿ ಇದ್ದಾರೆ. ಈ ಸ್ಮಾರಕವನ್ನು ನಾವು ಖಂಡಿತವಾಗಿ ಇದೇ ಭೂಮಿಯಲ್ಲಿ ನಿರ್ಮಿಸುತ್ತೇವೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now