ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಐದು ಗ್ಯಾರಂಟಿಗಳನ್ನು ನೀಡಲು ಪ್ಯ್ಲಾನ್ ನಡೆಯುತ್ತಿದೆ. ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೂ ಭರವಸೆಯನ್ನು ನೀಡಿದೆ. ಇದರ ಮಧ್ಯೆ ಬಿಜೆಪಿಗೂ ಟಾಂಗ್ ನೀಡಿದೆ.
ಈಗಾಗಲೇ ಬಿಜೆಪಿ ನಾಯಕರು ಆಡಳಿತ ಪಕ್ಷದ ಮೇಲೆ ಗದಾಪ್ರಹಾರಕ್ಕೆ ನಿಂತಿದ್ದಾರೆ. ಗ್ಯಾರಂಟಿಗಳನ್ನು ಇಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಮೊದಲು ಘೋಷಣೆಗಳನ್ನು ಜಾರಿಗೆ ತನ್ನಿ ಎನ್ನುತ್ತಿದ್ದಾರೆ. ಆದರೆ ಇದರ ಮಧ್ಯೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಿಲ್ಲ. ಅದೇ ದೊಡ್ಡ ಚಿಂತೆಯಾಗಿದೆ. ಈ ಸಂಬಂಧ ಕಾಂಗ್ರೆಸ್ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. @BJPKarnataka ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.