Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮೂರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ :   ಕಳ್ಳಿಹಟ್ಟಿ ಗೊಲ್ಲರಹಟ್ಟಿ ಪೋಷಕರ ಆಗ್ರಹ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 04 : KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಕಳ್ಳಿಹಟ್ಟಿ ಗೊಲ್ಲರಹಟ್ಟಿ ಸರ್ಕಾರಿ ಶಾಲೆಗಳನ್ನು ಮುಚ್ಚವುದನ್ನು ವಿರೋಧಿಸಿ ವಿದ್ಯಾರ್ಥಿ – ಪೋಷಕರ ಪ್ರತಿಭಟನೆ ಮಾಡಲಾಯಿತು.

ಎಐಡಿಎಸ್ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ ಅವರು ಮಾತನಾಡಿ, “ರಾಜ್ಯದಾದ್ಯಂತ 40,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಬಡ-ರೈತ-ಕೂಲಿ-ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಸಂಪೂರ್ಣವಾಗಿ ಕಿತ್ತುಕೊಳ್ಳುವ ಹುನ್ನಾರ ಈ ಯೋಜನೆಯದಾಗಿದೆ. ರಾಜ್ಯದಲ್ಲಿ 6000 ಗ್ರಾಮ ಪಂಚಾಯಿತಿ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್  ಶಾಲೆಯನ್ನಾಗಿ ಪರಿವರ್ತಿಸಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು AIDSO ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದರು.”

ಸರ್ಕಾರಿ ಶಾಲೆಗಳು ಗ್ರಾಮೀಣ ಭಾಗದಲ್ಲಿ ಸರ್ಕಾರಕ್ಕೂ ಮತ್ತು ಹಳ್ಳಿಯ ಜನರಿಗೂ  ಸಂಪರ್ಕ- ಸಂಬಂಧ ಕಲ್ಪಿಸುತ್ತದೆ? ಕೆಪಿಎಸ್ ಮ್ಯಾಗ್ನೆಟ್  ಹೆಸರಿನಲ್ಲಿ ಇಂತಹ ಸಂಬಂಧವನ್ನು ಕಡಿಯುವ ಕೆಟ್ಟ ಕೆಲಸವನ್ನು ಸರ್ಕಾರ ಮಾಡುತ್ತಿದೆ.

ಈ ರೀತಿ ಮಕ್ಕಳು ಶಿಕ್ಷಣದಿಂದ ವಂಚಿತರಾದರೇ ಸಮಾಜಕ್ಕೆ ಬಹಳಷ್ಟು ಮಾರಕವಾಗುತ್ತದೆ. ಇದನ್ನು ಅರಿತು ಸರ್ಕಾರ ಪ್ರತಿಯೊಂದು ಮಗುವಿಗೂ ಶಿಕ್ಷಣವನ್ನು ಕೊಡಲು ಮುಂದಾಗಬೇಕು. ಇಲ್ಲಿಯವರೆಗೂ ಆಡಳಿತ ನಡೆಸಿದ ಮೂರು ಪಕ್ಷದವರು ಕೂಡ  ಶಿಕ್ಷಣ ವಿರೋಧಿ ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ, ಇದನ್ನು ಹಾಸನದ ಜನತೆ ದೊಡ್ಡ ಮಟ್ಟದಲ್ಲಿ ವಿರೋಧಿಸಬೇಕು ಹೋರಾಟ ಕಟ್ಟಬೇಕು ಎಂದರು.

ಈ ಹಿನ್ನೆಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಚಿತ್ರದುರ್ಗ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳ ಪೋಷಕರ ಸಮಾವೇಶ ಚಿತ್ರದುರ್ಗ ಎಪಿಎಂಸಿ ಮಾರ್ಕೆಟ್ ರಸ್ತೆಯಲ್ಲಿರುವ ರೈತ ಭವನದಲ್ಲಿ ಇದೇ ಮಾರ್ಚ್ 8ನೇ ತಾರೀಖು ನಡೆಸಲಾಗುತ್ತಿದೆ, ಆದ್ದರಿಂದ ಎಲ್ಲಾ ಗ್ರಾಮಸ್ಥರು, ವಿದ್ಯಾರ್ಥಿಗಳು ಬಂದು ಭಾಗವಹಿಸಿ ಯಶಸ್ವಿಗೊಳಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕರು ಕೆ.ಈರಣ್ಣ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಅಧ್ಯಕ್ಷರು ರಾಮಕೃಷ್ಣ, ಉಪಾಧ್ಯಕ್ಷರು ಅಂಬ್ರೇಶ್, ಗೀರಿಶ್ ಕಾರ್ಯದರ್ಶಿ ಸಿದ್ದೇಶ್ ಮತ್ತು ವಿದ್ಯಾರ್ಥಿಗಳು, ಪೋಷಕರ ಗ್ರಾಮಸ್ಥರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...