ಚಿತ್ರದುರ್ಗ,(ಅ.22) : ಜಿಲ್ಲೆಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಹೊಸದುರ್ಗದಲ್ಲಿ ನ್ಯಾಯಾಲಯ ಉದ್ಘಾಟನೆ ಹಾಗೂ ಇನ್ನಿತರ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಗೆ ಮಂತ್ರಿಗಿರಿ ನೀಡದೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುತ್ತೇನೆ. ಹೈಕಮಾಂಡ್ ಜತೆ ಚರ್ಚಿಸಿ ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ” ಎಂದು ಭರವಸೆ ನೀಡಿದರು.
ಜಿಲ್ಲೆಯ ಬಹು ನಿರೀಕ್ಷಿತ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಇದರ ಕಾಮಗಾರಿ ತ್ವರಿತವಾಗಿ ಆಗುವಂತೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ
ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆ ಸಾರ್ವಜನಿಕ ಬಂಡವಾಳ ಹೂಡಿಕೆ ಸಮಿತಿ (PIB) ಅನುಮೋದನೆ ಆಗಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿದೆ.
ಈ ವಿಚಾರವಾಗಿ ಈಗಾಗಲೇ ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಮಾತನಾಡಿದ್ದೇನೆ. ರಾಜ್ಯದಲ್ಲಿಯೇ ಮೊದಲ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ. ಅಲ್ಲಲ್ಲಿ ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು, ಶೀಘ್ರ ಪೂರ್ಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.