Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಾನಕೋಗಿಲೆ ಎಸ್.ಜಾನಕಿಯವರ ಹೆಸರು ಅಜರಾಮರವಾಗಿಸುವ ಕೆಲಸ ಮಾಡುತ್ತೇವೆ : ಸಿಎಂ ಡಿಕೆಶಿ ಭರವಸೆ

---Advertisement---

ಬೆಂಗಳೂರು.ಜುಲೈ.12: ದಶಕಗಳ ಕಾಲ ಭಾರತೀಯ ಚಿತ್ರರಂಗದ ಗಾನಕೋಗಿಲೆಯಾಗಿ ರಂಜಿಸಿದ ಹಿರಿಯ ಗಾಯಕಿ ಎಸ್. ಜಾನಕಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾನಕಿಯವರ ಸಾಧನೆಯನ್ನು ಸ್ಮರಿಸುವ ಮತ್ತು ಅವರ ಹೆಸರನ್ನು ಅಜರಾಮರಗೊಳಿಸುವ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಐದು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಎಸ್. ಜಾನಕಿ ಅವರು ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟ ಎಂದು ಡಿಕೆಶಿ ಕಂಬನಿ ಮಿಡಿದರು.

ಗಾಯಕಿಯ ಪಾರ್ಥಿವ ಶರೀರವನ್ನು ಚೆನ್ನೈಗೆ ಕೊಂಡೊಯ್ಯಲು ಸರ್ಕಾರದಿಂದ ಅಗತ್ಯ ವ್ಯವಸ್ಥೆ ಕಲ್ಪಿಸುವುದಾಗಿ ಅವರ ಕುಟುಂಬಸ್ಥರಿಗೆ ಆಫರ್ ನೀಡಲಾಗಿತ್ತು. ಆದರೆ, ಮೈಸೂರಿನಲ್ಲೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಬೇಕೆಂಬುದು ಜಾನಕಿಯವರ ಕೊನೆಯ ಆಸೆಯಾಗಿತ್ತು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

Join WhatsApp

Join Now

Join Telegram

Join Now