Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ದುರ್ಬಲಗೊಂಡ ಮಳೆ : ಹವಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು..?

---Advertisement---

 

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದೆ. ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತ ಮಳೆಗಾಗಿ ಕಾದಿದ್ದೇ ಆಯ್ತು. ಆದ್ರೆ ಮಳೆ ಮಾತ್ರ ಬರಲೇ‌ ಇಲ್ಲ. ಆಗಸ್ಟ್ 24 ರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತೆ ಎಂದು ಹವಮಾನ ಇಲಾಖೆ‌ ಮುನ್ಸೂಚನೆಯನ್ನು ನೀಡಿತ್ತು. ಆದರೆ ಹೇಳಿದ ಸಮಯಕ್ಕೆ ಮಳೆ ಕೂಡ ಬರಲಿಲ್ಲ. ಮೋಡದತ್ತ ರೈತರು ಕಣ್ಣು ಬಿಟ್ಟು ಕೂತಿದ್ದಾರೆ.

ರಾಜ್ಯದಲ್ಲಿ ಜೂನ್‌ ನ ಆರಂಭದಲ್ಲೇ ವರುಣಾನ ಆಗಮನ ತಡವಾಗಿದ್ದು, ಆಗಸ್ಟ್‌ ಮೊದಲ ವಾರದಲ್ಲೇ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದ್ದು,ಜಲಾಶಯಗಳಲ್ಲಿಯೂ ನೀರಿನ ಮಟ್ಟ ಕಡಿಮೆಯಾಗಿದೆ. ಇನ್ನೂ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು.

ಮುಂಗಾರು ಮಳೆ ಈಗ ಕೈಕೊಟ್ಟಿದೆ. ಬೀಜ ಬಿತ್ತನೆ ಮಾಡಬೇಕೆಂದು ಕಾಯುತ್ತಿದ್ದ ರೈತರು ಬೇಸತ್ತು ಮನೆಗೆ ಬಂದಿದ್ದಾರೆ. ಈ ವಾರವಾದರೂ ಮಳೆ ಬಂದ್ರೆ ಹಾಗೋ ಹೀಗೋ ಬೀಜ ಬಿತ್ತನೆ ಮಾಡಬಹುದು ಎಂಬ ಆಸೆಯಿಂದ ಕಾಯುತ್ತಿದ್ದಾರೆ. ಮುಂದಿನ ವಾರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment