ದೆಹಲಿ: ಹಲವು ದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಗೊತ್ತೇ ಇದೆ. ನಮ್ಮ ನೆರೆಯ ರಾಷ್ಟ್ರವಾದ ಚೀನಾದಲ್ಲಿ ದಾಖಲೆಯ ಮಟ್ಟದಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಎಚ್ಚೆತ್ತುಕೊಂಡಿದೆ. ಆರೋಗ್ಯ ಸಚಿವ ಮನ್ಷುಖ್ ಮಾಂಡವಿಯಾ ಅವರು ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಕೇಂದ್ರ ಸರ್ಕಾರ
ಪ್ರಮುಖ ಸೂಚನೆಗಳನ್ನು ನೀಡಿದೆ.
ಕೋವಿಡ್ ವಿರುದ್ಧ ಜಾಗರೂಕರಾಗಿರಬೇಕು ಎಂದು ರಾಜ್ಯಗಳಿಗೆ ಕೇಂದ್ರ ಸೂಚಿಸಿದೆ. ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಿ. ಈ ಆದೇಶದಲ್ಲಿ, ಪ್ರಸ್ತುತ ವಿದೇಶದಿಂದ ಬರುವ ಮತ್ತು ಹೋಗುವವರಿಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸದ್ಯ ದೇಶದಲ್ಲಿ ಕೊರೊನಾ ಪ್ರಕರಣಗಳು ನಿಯಂತ್ರಣದಲ್ಲಿವೆ ಎಂದು ತಿಳಿಸಿದೆ.
ನಮ್ಮ ದೇಶದಲ್ಲಿ ಭಯಪಡುವಂತಹ ಪರಿಸ್ಥಿತಿ ಇಲ್ಲ ಎಂದು ತಿಳಿದುಬಂದಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ ಎಂದು ಕೇಂದ್ರ ಹೇಳಿದೆ. ಚೀನಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ವರದಿಯಾಗಿದೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಕೇಂದ್ರವು ವಾರಕ್ಕೊಮ್ಮೆ ಸಭೆಗಳನ್ನು ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…