Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಲ್ಮೆಟ್ ಧರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿ : ಬಿ.ಟಿ ಕುಮಾರಸ್ವಾಮಿ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ, ಆ.18: ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಪ್ರತಿಯೊಬ್ಬ ನಾಗರಿಕರು ಹೆಲ್ಮೆಟ್ ಧರಿಸಬೇಕು ಮತ್ತು ತಮ್ಮ ಅಮೂಲ್ಯವಾದ ಜೀವನವನ್ನು ಉಳಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗ ಜಿಲ್ಲಾ ಪೊಲೀಸ್ ಮತ್ತು ನಾಗರಿಕ ಬಂದೂಕು ತರಬೇತಿ ಶಿಭಿರಾರ್ಥಿಗಳ ಸಹಯೋಗದೊಂದಿಗೆ ಶುಕ್ರವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಧರಿಸುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರ ಜೀವ ಅಮೂಲ್ಯವಾದ್ದು, ನಿಮ್ಮನ್ನು ನಂಬಿಕೊಂಡು ಇಡೀ ಕುಟುಂಬ ಹಾಗೂ ಸಂಬಧಿಗಳು ನಿಮ್ಮ ಮೇಲೆ ಅವಲಂಬಿತರಾಗಿರುತ್ತಾರೆ. ಹೆಲ್ಮೆಟ್ ಧರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿಯಾಗಿರುತ್ತದೆ. ಎಲ್ಲಾ ನಾಗರಿಕರು ಹಾಗೂ ದ್ವಿಚಕ್ರ ವಾಹನ ಸವಾರರು ತಪ್ಪದೆ ಹೆಲ್ಮೇಟ್ ಧರಿಸಿಕೊಂಡು ವಾಹನವನ್ನು ಚಲಾಯಿಸಬೇಕು ಎಂದು ತಿಳಿಸಿದರು.

ಹೆಲ್ಮೆಟ್ ಜಾಗೃತಿ ಜಾಥವು ಒನಕೆ ಓಬವ್ವ ವೃತ್ತದಿಂದ ಆರಂಭಗೊಂಡು ಅಂಬೇಡ್ಕರ್ ವೃತ್ತ, ಬಿ.ಡಿ ರಸ್ತೆ ಮೂಲಕ ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕನಕ ವೃತ್ತ ತಲುಪಿತು.  ಜಾಥದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ಕುಮಾರಸ್ವಾಮಿ, ಪೊಲೀಸ್ ಸಿಬ್ಬಂದಿಗಳು ಹಾಗೂ ನಾಗರಿಕ ಬಂದೂಕು ತರಬೇತಿ ಶಿಭಿರಾರ್ಥಿಗಳು ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!