ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, ಆ.18: ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಪ್ರತಿಯೊಬ್ಬ ನಾಗರಿಕರು ಹೆಲ್ಮೆಟ್ ಧರಿಸಬೇಕು ಮತ್ತು ತಮ್ಮ ಅಮೂಲ್ಯವಾದ ಜೀವನವನ್ನು ಉಳಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಹೇಳಿದರು.
ಚಿತ್ರದುರ್ಗ ಜಿಲ್ಲಾ ಪೊಲೀಸ್ ಮತ್ತು ನಾಗರಿಕ ಬಂದೂಕು ತರಬೇತಿ ಶಿಭಿರಾರ್ಥಿಗಳ ಸಹಯೋಗದೊಂದಿಗೆ ಶುಕ್ರವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಧರಿಸುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬರ ಜೀವ ಅಮೂಲ್ಯವಾದ್ದು, ನಿಮ್ಮನ್ನು ನಂಬಿಕೊಂಡು ಇಡೀ ಕುಟುಂಬ ಹಾಗೂ ಸಂಬಧಿಗಳು ನಿಮ್ಮ ಮೇಲೆ ಅವಲಂಬಿತರಾಗಿರುತ್ತಾರೆ. ಹೆಲ್ಮೆಟ್ ಧರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿಯಾಗಿರುತ್ತದೆ. ಎಲ್ಲಾ ನಾಗರಿಕರು ಹಾಗೂ ದ್ವಿಚಕ್ರ ವಾಹನ ಸವಾರರು ತಪ್ಪದೆ ಹೆಲ್ಮೇಟ್ ಧರಿಸಿಕೊಂಡು ವಾಹನವನ್ನು ಚಲಾಯಿಸಬೇಕು ಎಂದು ತಿಳಿಸಿದರು.
ಹೆಲ್ಮೆಟ್ ಜಾಗೃತಿ ಜಾಥವು ಒನಕೆ ಓಬವ್ವ ವೃತ್ತದಿಂದ ಆರಂಭಗೊಂಡು ಅಂಬೇಡ್ಕರ್ ವೃತ್ತ, ಬಿ.ಡಿ ರಸ್ತೆ ಮೂಲಕ ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕನಕ ವೃತ್ತ ತಲುಪಿತು. ಜಾಥದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ಕುಮಾರಸ್ವಾಮಿ, ಪೊಲೀಸ್ ಸಿಬ್ಬಂದಿಗಳು ಹಾಗೂ ನಾಗರಿಕ ಬಂದೂಕು ತರಬೇತಿ ಶಿಭಿರಾರ್ಥಿಗಳು ಪಾಲ್ಗೊಂಡಿದ್ದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…