ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಬ್ರೇಕ್ ನೀಡಿದ್ದ ಮಳೆರಾಯ ಈಗ ಮತ್ತೆ ಬರುವ ಸೂಚನೆ ನೀಡಿದ್ದಾನೆ. ನಾಳೆಯಿಂದ ರಾಜ್ಯಾದ್ಯತ ಮಳೆರಾಯನ ಆರ್ಭಟ ಶುರುವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ ಮಳೆಯ ಆರ್ಭಟ ಇರಲಿದೆ. ಬೆಂಗಳೂರು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಅಂಡಮಾನ್ ನಲ್ಲಿ 508 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಡಿಸೆಂಬರ್ 8ರ ತನಕ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಡಿಸೆಂಬರ್ 8,9 ಮತ್ತು 10ರಂದು ಗುಡುಗು ಸಹಿತ ಮಳೆಯಾಗಲಿದೆ. ನಾಳೆಯಿಂದ ವಾತಾವರಣದಲ್ಲಿ ಚಳಿ ಹೆಚ್ಚಾಗಲಿದ್ದು, 8 ಮತ್ತು 9 ರಂದು ಮಳೆಯಾಗಲಿದೆ. ಹೀಗಾಗಿ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.