ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇಂದು ಸಿಎಂ ಬೊನ್ನಾಯಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಟಫ್ ರೂಲ್ಸ್ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ.
ಸಭೆ ಬಳಿಕ ಸಚಿವ ಆರ್ ಅಶೋಕ್ ಮಾತನಾಡಿದ್ದು, ಹೊಸ ನಿಯಮಗಳ ಬಗ್ಗೆ ತಿಳಿಸಿದ್ದಾರೆ. ಇದರಲ್ಲಿ ಬೆಂಗಳೂರಿಗೆ ಪ್ರತ್ಯೇಕ ಹಾಗೂ ರಾಜ್ಯಕ್ಕೆ ಪ್ರತ್ಯೇಕ ನಿಯಮಗಳನ್ನ ಮಾಡಲಾಗಿದೆ.
ರಾಜ್ಯಾದ್ಯಂತ ಜನವರಿ 7 ಅಂದ್ರೆ ಶುಕ್ರವಾರ ಸಂಜೆಯಿಂದಲೇ ನೈಟ್ ಕರ್ಫ್ಯೂ ಆರಂಭವಾಗುತ್ತದೆ. ಎರಡು ವಾರಗಳ ಕಾಲ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಇನ್ನು ಮದುವೆಗಳಿಗೆ ಹೊರಾಂಗಣ 200, ಒಳಾಂಗಣ 100 ಜನರಿಗೆ ಅವಕಾಶ ನೀಡಲಾಗಿದೆ. ಚಿತ್ರಮಂದಿರ, ಬಾರ್, ಮಾಲ್, ಪಬ್ ಗಳಲ್ಲಿ ಶೇಕಡ 50 ಕ್ಕೆ ಅವಕಾಶ ನೀಡಲಾಗಿದೆ.
ಬಸ್ ಹಾಗೂ ಮೆಟ್ರೋದಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ಸೀಟಿನ ಪ್ರಮಾಣ ನೋಡಿಕೊಂಡೆ ಹತ್ತಿಸಿಕೊಳ್ಳಬೇಕು.
ರಾಜ್ಯದಲ್ಲಿ ಪ್ರತಿಭಟನೆ, ಜಾತ್ರೆ, ಜನಜಂಗುಳಿ ಮಾಡುವಂತಿಲ್ಲ.