Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತ : ವಿಜಯೇಂದ್ರರ ಗುಣಕ್ಕೊಂದು ಮೆಚ್ಚುಗೆ

---Advertisement---

ಬಾಗಲಕೋಟೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತಿಗೆ ಮುಂಚೆ ಬಿ ಎಸ್ ಯಡಿಯೂರಪ್ಪ ಅವರ ಫ್ಯಾಮಿಲಿ‌ ಮೇಲೆ ಕೆಂಡಕಾರ್ತಾರೆ. ಯಡಿಯೂರಪ್ಪ ಅವರ ಮೇಲೆ ಮಾತ್ರವಲ್ಲ, ವಿಜಯೇಂದ್ರ ಅವರ ಮೇಲೂ ಕೆಂಡ ಕಾರುತ್ತಾ ಇರುತ್ತಾರೆ. ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ಮಾಡಿರೋದರ ಯತ್ನಾಳ್ ಅವರಿಗೆ ಇಷ್ಟ ಇಲ್ಲ. ಅದನ್ನ ಅವರು ಕೂಡ ಬಹಿರಂಗವಾಗಿಯೇ ತಿಳಿಸಿದ್ದಾರೆ. ಯತ್ನಾಳ್ ಅವರ ಈ ರೀತಿಯ ಮಾತುಗಳಿಂದಾನೇ ಪಕ್ಷದಿಂದ ದೂರ ಉಳಿಯುವಂತೆ ಆಗಿದೆ. ಆದರೆ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರರಿಂದ ಈ ರೀತಿಯ ಮಾತುಗಳು ಬಂದಿಲ್ಲ. ಪಕ್ಷಕ್ಕಾಗಿ ಅವರಾಡಿದ ಮಾತು,‌ಕಾಡುದ ದ್ವೇಷವನ್ನು ಮರೆತು ಪ್ರಚಾರಕ್ಕೆ ಬರಲಿ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಮಾತನ್ನಾಡುತ್ತಾ, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯನ್ನ ಗೆಲ್ಲಿಸಬೇಕು ಅಂತ ಹೇಳಿ ಕಾಂಗ್ರೆಸ್ ಪಕ್ಷದವರು ಕೆಲಸ ಮಾಡ್ತಾ ಇದ್ದಾರೆ. ಎರಡು ಕ್ಷೇತ್ರದಲ್ಲೂ ಇದೆ. ನಾನು ಉಡಾಫೆಯಾಗಿ ಮಾತನ್ನಾಡ್ತಾ ಇಲ್ಲ, ಪ್ರಾಮಾಣಿಕವಾಗಿ ಹೇಳ್ತಾ ಇದ್ದೇನೆ. ಹಂಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಅಂತ ಯಾರೇ ಕೆಲಸ ಮಾಡಿದರು ಅದನ್ನ ನಾನು ಸ್ವಾಗತ ಮಾಡ್ತೇನೆ ಎಂದು ಹೃಳುವ ಮೂಲಕ ಯತ್ನಾಳ್ ಅವರನ್ನು ಸ್ವಾಗತಿಸಿದ್ದಾರೆ.

ಇದೇ ವೇಳೆ ಎಂಬಿ ಪಾಟೀಲ್ ಅವರು ಬಿಜೆಪಿ ಬಗ್ಗೆ ಇಪ್ಪತ್ತು ಬಾಗಿಲುಗಳಾಗಿವೆ ಎಂದು ಮಾತನ್ನಾಡಿದರ ಬಗ್ಗೆ, ಮೊದಲು ಚುನಾವಣಾ ಫಲಿತಾಂಶ ಬರಲಿ ಕಾಂಗ್ರೆಸ್ ಪಕ್ಷದಲ್ಲಿ ಎಷ್ಟು ಬಾಗಿಲುಗಳಿವರ, ಬಿಜೆಪಿಯಲ್ಲಿ ಎಷ್ಟು ಬಾಗಿಲುಗಳಿವೆ ಅನ್ನೋದು ಅವರಿಗೇನೆ ತಿಳಿಯುತ್ತದೆ ಎಂದಿದ್ದಾರೆ. ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ಪರ ವಿಜಯೇಂದ್ರ ಅವರು ಪ್ರಚಾರಕ್ಕೆ ಇಳಿದಿದ್ದಾರೆ. ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂದು ಹಠ ತೊಟ್ಟಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...