ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗಿನ ಹಗರಣಗಳನ್ನು ಬಯಲಿಗೆಳೆಯುತ್ತೇನೆಂದು ಹೇಳಿದ್ದ ಸಚಿವ ಅಶ್ವತ್ಥ್ ನಾರಾಯಣ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟ್ವೀಟ್ ಮಾಡುವ ಸಚಿವರಿಗೆ ತಿರುಗೇಟು ನೀಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯ ಹಗರಣಗಳನ್ನು ತನಿಖೆಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆಯಲಿರುವ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಇದೇ ರೀತಿ ಪಿ.ಎಸ್.ಐ ನೇಮಕಾತಿ ಹಗರಣದಲ್ಲಿ ಅವರ ಮೇಲಿನ ಆರೋಪಗಳ ಬಗ್ಗೆಯೂ ತನಿಖೆಗೆ ಒತ್ತಾಯಿಸಿ ಪತ್ರ ಬರೆಯಲು ಕೇಳಿಕೊಳ್ಳುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಯಿತು.
ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ? ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?. ರಾಜ್ಯ ಬಿಜೆಪಿ ಸರ್ಕಾರದ ಸಾಲು ಸಾಲು ಹಗರಣಗಳನ್ನು ಬಯಲಿಗೆಳೆಯದಂತೆ ತಡೆಯಲು ನೀವು ಮಾಡುತ್ತಿರುವ ಬೆದರಿಕೆ ರೂಪದ ಆರೋಪಗಳಿಗೆ ನಾವು ಬಗ್ಗುವವರಲ್ಲ. ಈ ರೀತಿಯ ಈ ಬ್ಲಾಕ್ ಮೇಲ್ ತಂತ್ರದಿಂದ ನಮ್ಮ ಬಾಯಿ ಮುಚ್ಚಿಸಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ.
ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ತನಿಖೆಗಾಗಿ ಇಡೀ ವಿಧಾನಸೌಧವನ್ನೇ ತನಿಖಾ ಸಂಸ್ಥೆಗಳಿಗೆ ಬಿಟ್ಟುಕೊಡಬೇಕಾಗಬಹುದು. ಸಚಿವರು ಬೇರೇನೂ ಕೆಲಸ ಮಾಡದೆ ತನಿಖಾಧಿಕಾರಿಗಳ ಮುಂದೆ ನಿತ್ಯ ವಿಚಾರಣೆಗೆ ಹಾಜರಿ ಹಾಕಬೇಕಾಗಬಹುದು. ಇದಕ್ಕಿಂತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದಿದ್ದಾರೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…