ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸೇರಿದಂತೆ ಏನೆಲ್ಲಾ ಷರತ್ತುಗಳು ಮತ್ತು ನಿಬಂಧನೆಗಳಿವೆ ?   ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹೇಳಿದ್ದೇನು ?

ಚಿತ್ರದುರ್ಗ. ಮಾ.16:  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಂತೆ ಜಿಲ್ಲೆಯಾದ್ಯಂತ ಕನ್ನಡ ಭಾಷೆಯ ವ್ಯಾಪಕ ಬಳಕೆ ಹಾಗೂ ಶೇ.60ರಷ್ಟು ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ರನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವ ಕುರಿತಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮ್ರ ಅಭಿವೃದ್ಧಿ ವಿಧೇಯಕ ಜಾರಿಗೆ ಬಂದಿದ್ದು, ಜಿಲ್ಲೆಯಾದ್ಯಂತ ಕನ್ನಡ ಭಾಷೆಯನ್ನು ಶೇ.60ಕ್ಕಿಂತ ಹೆಚ್ಚಾಗಿ ವ್ಯಾಪಕವಾಗಿ ಬಳಕೆ ಮಾಡಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಕನ್ನಡವನ್ನು ಅನುಷ್ಠಾನಗೊಳಿಸಲು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು ಅಥವಾ ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿರುವ ಹೆಸರುಗಳು, ಮತ್ತು ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸವ ಅಧಿಕಾರಿಗಳ ಹೆಸರು ಮತ್ತು ಪದನಾಮಗಳನ್ನು ಸೂಚಿಸುವ ಫಲಕಗಳು ಪ್ರಮುಖವಾಗಿ ಶೇ.60ರಷ್ಟು ಕನ್ನಡದಲ್ಲಿ ಇರಬೇಕು.

ರಸ್ತೆಗಳು ಮತ್ತು ಬಡಾವಣೆ ಪ್ರದೇಶಗಳ  ಹೆಸರುಗಳೂ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಮತ್ತು ಸ್ಥಳೀಯ ಪ್ರಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಹಾಕಲಾಗಿರುವ ಫಲಕಗಳು ಮೇಲೆ ಪ್ರದರ್ಶಿಸಲಾಗುವ ವಿವರಗಳು ಪ್ರಮುಖವಾಗಿ ಕನ್ನಡದಲ್ಲಿ ಇರಬೇಕು.

ಕರ್ನಾಟಕದಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರ ಪ್ರಕಟಣೆಗಾಗಿ ಹೊರಡಿಸಿದ ಎಲ್ಲಾ ಟೆಂಡರ್ ಅಧಿಸೂಚನೆ, ಜಾಹೀರಾತು, ಅರ್ಜಿ ನಮೂನೆ, ಡಿಜಿಟಲ್ ನಮೂನೆ, ಪ್ರಮಾಣ ಪತ್ರ ಮತ್ತು ಅಧಿಸೂಚನೆಗಳು ಕನ್ನಡದಲ್ಲಿ ಇರಬೇಕು. ಕಾರ್ಯಕ್ರಮಗಳ ಕುರಿತ ಕರಪತ್ರ, ಬ್ಯಾನರು, ಪ್ಲೆಕ್ಸು, ಎಲೆಕ್ಟ್ರಾನಿಕ್ ಪ್ರದರ್ಶನ ಫಲಕ, ಮಾಹಿತಿಗಳು, ನೋಟೀಸುಗಳು ಕನ್ನಡದಲ್ಲಿ ತರತಕ್ಕದ್ದು. ಸರ್ಕಾರವು ಕೈಗೊಂಡಂತಹ, ಸರ್ಕಾರ ಅಥವಾ ಸಂಬಂಧಿತ ಸಂಸ್ಥೆಗಳು ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಯಾವುದೇ ರೀತಿಯ ಪ್ರತಿಫಲ, ಅನುದಾನ ರಿಯಾಯಿತಿ ಪಡೆದು ಅನುಷ್ಠಾನಗೊಳಿಸುತ್ತಿರುವ ಯಾವುದೇ ಯೋಜನೆಗೆ ಸಂಬಂಧಿಸಿದ ಫಲಕ, ಜಾಹೀರಾತು, ರಸೀದಿ, ಬಿಲ್ಲು, ನೋಟಿಸುಗಳು ಕನ್ನಡದಲ್ಲಿ ಇರಬೇಕು ಎಂದು ಹೇಳಿದರು.
ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‍ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು 60% ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಾದ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಶೇ.60%ರಷ್ಟು ಕನ್ನಡದಲ್ಲಿ ಇರಬೇಕು. ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲಾ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಗದಿಪಡಿಸಿದಂತೆ ಇರಬೇಕು ಎಂದರು.
ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

11 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

48 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago