Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಸಿಂಧೂರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು‌..?

---Advertisement---

ಬೆಂಗಳೂರು; ಪಾಕ್ ಉಗ್ರರ ದಾಳಿಗೆ ಪ್ರತಿಕಾರದ ದಾಳಿಯನ್ನ ಭಾರತ ಶುರು ಮಾಡಿದೆ. ಹಿಂದೂ ಹೆಣ್ಣು ಮಕ್ಕಳ ಸಿಂಧೂರ ಅಳಿಸಿದವರಿಗೆ ಆಪರೇಷನ್ ಸಿಂಧೂರದ ಮೂಲಕವೇ ಭಾರತ ಪ್ರತ್ಯುತ್ತರ ನೀಡಿದೆ. ರಾತ್ರೋ ರಾತ್ರಿ ನಡೆದ ದಾಳಿಯಲ್ಲಿ ಉಗ್ರರನ್ನ ಮಟ್ಟ ಹಾಕಲಾಗಿದೆ. ಏನಿಲ್ಲ ಅಂದ್ರು 80 ಕ್ಕೂ ಹೆಚ್ಚು ಉಗ್ರರು ಈ ದಾಳಿಯಲ್ಲಿ ಸತ್ತಿದ್ದಾರೆ ಎನ್ನಲಾಗಿದೆ. ಈ ದಾಳಿಯ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಸಿಂಧೂರ್ ಹಿಂದೆ ಇರುವ ನಮ್ಮ ಸೈನ್ಯದ ದೈರ್ಯಕ್ಕೆ ಮೆಚ್ಚಲೇಬೇಕು. ಭಯೋತ್ಪಾದನೆಯನ್ನ ಭಾರತ ಯಾವತ್ತಿಗೂ ಸಹಿಸಲ್ಲ. ಪೆಹಲ್ಗಾಮ್ ನಲ್ಲಿ ನಡೆದ ಕ್ರೂರ ದಾಳಿಯು ಕೇವಲ ಮುಗ್ಧ ಜೀವಗಳ‌ ಮೇಲಲ್ಲ. ಇದು ಭಾರತದ ಕನಸುಗಳು ಮತ್ತು ಚೈತನ್ಯದ ಮೇಲಿನ ದಾಳಿಯಾಗಿದೆ. ಧೈರ್ಯಶಾಲಿ ಸೈನಿಕರ ಪ್ರತಿಯೊಂದು ಪ್ರಯತ್ನವು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಪ್ರತಿಜ್ಞೆ. ಸೇನೆಯ ಕಾರ್ಯಗಳಿಗೆ ನಾವೂ ಹೆಮ್ಮೆ ಪಡುತ್ತೇವೆ. ಭಯೋತ್ಪಾದನೆಗೆ ಇಲ್ಲಿ ಸ್ಥಾನವಿಲ್ಲ. ಭಾರತವೂ ಶಕ್ತಿ ಏಕತೆಯೊಂದಿಗೆ ಪ್ರತಿಕ್ರಿಯೆ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.

ಇದೇ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಪೆಹಲ್ಗಾಮ್ ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಗೆ ಆಪರೇಷನ್ ಸಿಂಧೂರ ಸೂಕ್ತ ಪ್ರತ್ಯುತ್ತರ ನೀಡಿದೆ. ನಾವೂ ಸರ್ಕಾರದೊಂದಿಗೆ ನಿಲ್ಲುತ್ತೇವೆ. ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಜೈ ಹಿಂದ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇಡೀ ಭಾರತ ದೇಶವೇ ಈ ಆಪರೇಷನ್ ಸಿಂಧೂರಕ್ಕೆ ಹೊಗಳುತ್ತಿದ್ದಾರೆ. ಹೆಮ್ಮೆ ಪಡುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...