Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಏನೇನು ಹೇಳಿದರು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

---Advertisement---

ಸುದ್ದಿಒನ್, ಚಿತ್ರದುರ್ಗ ಜನವರಿ. 28 : ಇಂದು ಜಿಲ್ಲೆಯಲ್ಲಿ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ದಲಿತರಿಗೆ, ಶೋಷಿತರಿಗೆ ಸಲಹೆಯನ್ನು ನೀಡಿದ್ದಾರೆ.

ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ.

ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು.

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ. ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು.

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ. ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹಿ ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದರು.

ಈ ಕಾರಣಕ್ಕೇ ಪಟ್ಟ ಭದ್ರ ಹೊತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment