Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ದರ್ಪಕ್ಕೆ ಸಿಎಂ ಸಿದ್ದರಾಮಯ್ಯ ಏನಂದ್ರು..?

---Advertisement---

ಬೆಂಗಳೂರು; ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಹಲ್ಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ.

 

ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ.

 

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ. ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment