ಬೆಂಗಳೂರು: ಲೋಕಸಭೆಯಲ್ಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದು ಜೆಡಿಎಸ್ ನಲ್ಲಿ ಸಾಕಷ್ಟು ಕಾರ್ಯಕರ್ತರಿಗೆ ಇಷ್ಟವಿಲ್ಲ. ಈ ಬೇಸರವನ್ನ ಈಗಾಗಲೇ ಸಾಕಷ್ಟು ಬಾರಿ ಹೊರ ಹಾಕಿದ್ದಾರೆ. ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಈಗಾಗಲೇ ಒರಿಜಿನಲ್ ಜೆಡಿಎಸ್ ನಮ್ಮದು. ಕುಮಾರಸ್ವಾಮಿ ಅವರನ್ನೇ ಉಚ್ಛಾಟನೆ ಮಾಡಬೇಕೆಂಬ ಮಾತುಗಳು ಕೇಳಿ ಬರುತ್ತಿವೆ ಎಂದಿದ್ದರು.
ಇಬ್ರಾಹಿಂ ಅವರ ಮಾತಿಗೆ ಈಗಾಗಲೇ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ಸಿಲ್ಲಿ ವಿಷಯ. ಜೆಡಿಎಸ್ ನಂದೇ ಎನ್ನುವವರು ಒರಿಜಿನಲ್ ಬೋರ್ಡ್ ಹಾಕಿಕೊಳ್ಳಲಿ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅವರಿಗೆ ಬಿಟ್ಟಿದ್ದು. ಏನು ಮಾಡವೇಕು ಎಂಬುದು ನನಗೆ ಗೊತ್ತಿದೆ. ನಮ್ಮ ಹಿರಿಯರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.
ಇನ್ನು ಈ ಸಂಬಂಧ ದೇವೇಗೌಡ ಅವರು ಪ್ರತಿಕ್ರಿಯೆ ನೀಡುವುದಕ್ಕೂ ಮುನ್ನ ನಸು ನಕ್ಕಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮೂರ್ನಾಲ್ಕು ದಿನಗಳು ಕಳೆಯಲಿ. ಆಮೇಲೆ ಪಾರ್ಟಿ ಆಫೀಸ್ ಗೆ ಬರುತ್ತೀನಿ. ಬಳಿಕ ಮಾತನಾಡುತ್ತೀನಿ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















