Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬೊಮ್ಮಾಯಿ ಅವರನ್ನು ನಾಯಿ ಥರ ಎಂದ ಸಿದ್ದರಾಮಯ್ಯ ಮಾತಿಗೆ ಸಚಿವ ಬಿಸಿ ಪಾಟೀಲ್ ಹೇಳಿದ್ದೇನು..?

Facebook
Twitter
Telegram
WhatsApp

ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ರೀತಿ ಇರುತ್ತಾರೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೃಷಿ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಸಿ ಪಾಟೀಲ್, ರಾಜ್ಯದ ಮುಖ್ಯಮಂತ್ರಿಗಳನ್ನು ನಾಯಿಗೆ ಹೋಲಿಸಿರುವ ಸಿದ್ದರಾಮಯ್ಯ ಅವರ ಈ ಬುದ್ಧಿ ಹಾಗೂ ಮಾತುಗಳು ಸಿದ್ದರಾಮಯ್ಯರ ನೀಚಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಪ್ರಧಾನಿಗಳಿಗೆ ಮುಖ್ಯಮಂತ್ರಿಗಳು ತೋರುತ್ತಿರುವುದು ಗೌರವಭಾವವೇ ಹೊರತು ನಿಮ್ಮಂತೆ ಇಟಲಿಯವರ ಗುಲಾಮಿಗಿರಿಯಲ್ಲ ಸಿದ್ದರಾಮಯ್ಯನವರೇ‌.ಸಿದ್ದರಾಮಯ್ಯನವರು ಮಾತನಾಡಬೇಕಾದರೇ ಬಾಯಿಬಂದಂತೆ ಮಾತನಾಡುವ ಪ್ರವೃತ್ತಿಯನ್ನು ಬಿಡಬೇಕು. ಮುಂದಿನ ದಿನಗಳಲ್ಲಿ ಮತದಾರರೇ ತಮ್ಮ ಪಾರ್ಟಿಯನ್ನು ನಾಯಿಯಂತೆ ಮುದುಡಿಸಿ ಮೂಲೆಯಲ್ಲಿ ಕೂರಿಸುವುದರಲ್ಲಿ ಸಂಶಯವೇ ಇಲ್ಲ.

ಗುಳ್ಳೇನರಿಯಂತೆ ಇಟಲಿಯವರ ಮುಂದೆ ಕೈಕಟ್ಟಿ ನಿಲ್ಲುವಾಗ ಸಿದ್ದರಾಮಯ್ಯ ಕೂಡ ನಾಯಿಮರಿಯಂತೇ ಇದ್ದಿದ್ದು ಮರೆತುಹೋಯಿತೇ?. ಸಿದ್ದರಾಮಯ್ಯನವರು‌ ಮುಖ್ಯಮಂತ್ರಿಗಳಿಗೆ ಬಹಿರಂಗ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!