ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ರೀತಿ ಇರುತ್ತಾರೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೃಷಿ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಸಿ ಪಾಟೀಲ್, ರಾಜ್ಯದ ಮುಖ್ಯಮಂತ್ರಿಗಳನ್ನು ನಾಯಿಗೆ ಹೋಲಿಸಿರುವ ಸಿದ್ದರಾಮಯ್ಯ ಅವರ ಈ ಬುದ್ಧಿ ಹಾಗೂ ಮಾತುಗಳು ಸಿದ್ದರಾಮಯ್ಯರ ನೀಚಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಪ್ರಧಾನಿಗಳಿಗೆ ಮುಖ್ಯಮಂತ್ರಿಗಳು ತೋರುತ್ತಿರುವುದು ಗೌರವಭಾವವೇ ಹೊರತು ನಿಮ್ಮಂತೆ ಇಟಲಿಯವರ ಗುಲಾಮಿಗಿರಿಯಲ್ಲ ಸಿದ್ದರಾಮಯ್ಯನವರೇ.ಸಿದ್ದರಾಮಯ್ಯನವರು ಮಾತನಾಡಬೇಕಾದರೇ ಬಾಯಿಬಂದಂತೆ ಮಾತನಾಡುವ ಪ್ರವೃತ್ತಿಯನ್ನು ಬಿಡಬೇಕು. ಮುಂದಿನ ದಿನಗಳಲ್ಲಿ ಮತದಾರರೇ ತಮ್ಮ ಪಾರ್ಟಿಯನ್ನು ನಾಯಿಯಂತೆ ಮುದುಡಿಸಿ ಮೂಲೆಯಲ್ಲಿ ಕೂರಿಸುವುದರಲ್ಲಿ ಸಂಶಯವೇ ಇಲ್ಲ.
ಗುಳ್ಳೇನರಿಯಂತೆ ಇಟಲಿಯವರ ಮುಂದೆ ಕೈಕಟ್ಟಿ ನಿಲ್ಲುವಾಗ ಸಿದ್ದರಾಮಯ್ಯ ಕೂಡ ನಾಯಿಮರಿಯಂತೇ ಇದ್ದಿದ್ದು ಮರೆತುಹೋಯಿತೇ?. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಿಗೆ ಬಹಿರಂಗ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…