ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎಂಬ ಬೇಸರ ಇದೆ. ಅದರ ಜೊತೆಗೆ ಸರ್ಕಾರಿ ಶಾಲೆಗಳ ವ್ಯವಸ್ಥೆ ಸರಿಯಾಗಬೇಕಾದ ಅನಿವಾರ್ಯತೆ ಇದೆ. ಬಳಿಕ ಮಕ್ಕಳನ್ನು ಪೋಷಕರು ಸರ್ಕಾರಿ ಶಾಲೆಗೆ ಕರೆತರಬಹುದು. ಅದರಲ್ಲೂ ಮುಖ್ಯವಾಗಿ ಶಿಕ್ಷಕರ ಕೊರತೆ ಎದ್ದು ಕಾಣಿತ್ತಿದೆ.
ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದು, ಶಿಕ್ಷಕರ ಕೊರತೆ ಇದೆ. ಅದನ್ನು ನಾವು ಸರಿ ಮಾಡುತ್ತೇವೆ. ಸದ್ಯ 25000 ಶಿಕ್ಷಕರ ವರ್ಗಾವಣೆಯಾಗಿದೆ. ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಮಾಡುತ್ತಿದ್ದೇವೆ ಎಂದಿದ್ದಾರೆ.
ಇದೆ ವೇಳೆ ತಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಿ, ಗ್ಯಾರಂಟಿ ಬಗ್ಗೆ ಟೀಕೆ ಮಾಡ್ತಿದ್ದಾರೆ. ಕಟೀಲು ನಾಟಕಕ್ಕೆ ಜನರೇ ಬುದ್ಧಿ ಕಲಿಸಿದ್ದಾರೆ. ಕಟಿಲ್ ಸೋಲಿಸಿ ಕಾಂಗ್ರೆಸ್ ಗೆಲಿಸಿದ್ದಾರೆ ಎಂದಿದ್ದಾರೆ.