Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಬಗ್ಗೆ ಎಂಎಲ್ಎ ಬಸವರಾಜ್ ಶಿವಗಂಗಾ ಹೇಳಿದ್ದೇನು..?

---Advertisement---

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ಮೇಲೆ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಉಳಿದಿದೆ. ಈ ಕ್ಷೇತ್ರದ ಉಪಚುನಾವಣೆಯೂ ನಡೆಯಲಿದೆ. ಬಹಳಷ್ಟು ವರ್ಷಗಳಿಂದಾನೂ ಈ ಜಿಲ್ಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಪ್ರಭಾವವೇ ಹೆಚ್ಚಾಗಿದೆ. ಪ್ರತಿಬಾರಿ ಅಲ್ಲಿನ ಜನ ಶಾಮನೂರು ಶಿವಶಂಕರಪ್ಪ ಅವರನ್ನ ಗೆಲ್ಲಿಸ್ತಾ ಇದ್ದರು. ಮಗ ಮಲ್ಲಿಕಾರ್ಜುನ್ ಸಚಿವರಾಗಿದ್ದಾರೆ, ಸೊಸೆ ಪ್ರಭಾ ಮಲ್ಲಿಕಾರ್ಜುನ್ ಸಂಸದೆಯಾಗಿದ್ದಾರೆ. ಇದರ ನಡುವೆ ಮಲ್ಲಿಕಾರ್ಜುನ್ ಅವರು ತಮ್ಮ ಮಗನ ರಾಜಕೀಯ ಭವಿಷ್ಯಕ್ಕೋಸ್ಕರ ಹೋರಾಟ ಶುರು ಮಾಡಿದ್ದಾರೆ. ಜೊತೆಗೆ ಅಲ್ಪಸಂಖ್ಯಾತರಿಗೆ ಟಿಕೆಟ್ ಎಂಬ ಚರ್ಚೆಯೂ ಜೋರಾಗಿ ನಡೀತಾ ಇದೆ. ಅಲ್ಲಿನ ಕ್ಷೇತ್ರದ ಟಿಕೆಟ್ ಬಗ್ಗೆ ಎಂಎಲ್ಎ ಬಸವರಾಜ್ ಶಿವಗಂಗಾ ಮಾತನ್ನಾಡಿದ್ದಾರೆ.

ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಸುಮಾರು ಸಲ ಮಾತಾಡಿದ್ದೀನಿ ದಾವಣಗೆರೆ ದಕ್ಷಿಣ ಕ್ಷೇತ್ರದ್ದು. ಅಲ್ಪಸಂಖ್ಯಾತರಿಗೆ ಒಂದು ಅವಕಾಶ ಮಾಡಿಕೊಡಿ ಅಂತ. ಯಾಕಂದ್ರೆ ಇಡೀ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ. ಬರೀ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯದಲ್ಲಿ ನಿಂತಿದ್ದಾರೆ. ಶಿಗ್ಗಾಂವಿಯಲ್ಲಿ ಸಹ ಮೈನಾರಿಟಿಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದೀವಿ. ಅದೇ ರೀತಿ ಇಲ್ಲೂ ಸಹ ಗೆಲ್ಲಿಸಿಕೊಂಡು ಬರ್ತೀವಿ. ಅವರಿಗೊಂದು ಅವಕಾಶ ಕೊಡಲಿ ಅನ್ನೋದು ನನ್ನದೊಂದು ಮನವಿ.

ಅಲ್ಪಸಂಖ್ಯಾತರು ಬೇಡ, ಇನ್ನೊಬ್ಬರು ಬೇಡ, ಹೊಸ ಮುಖಗಳು ಬೇಕು ಅಂತ ಅವರು ಅಂದುಕೊಂಡರೆ ನಮ್ಮ ಬ್ರದರ್ ಗೆ ಕೊಡಲಿ ಅಂತ ಹೇಳಿದ್ದೀನಿ. ಹೊರಗೊಂದು, ಒಳಗೊಂದು ಮಾತನ್ನಾಡುವುದಕ್ಕೆ ನಂಗೆ ಬರೋದಿಲ್ಲ.‌ ಹೈಕಮಾಂಡ್ ಯಾರಿಗೆ ಕೊಟ್ಟರು ಓಕೆ. ನಮಗೆ ಕೊಟ್ಟರು ಓಕೆ. ಆದರೆ ಅಲ್ಪಸಂಖ್ಯಾತರಿಗೆ ಮೊದಲು ಆದ್ಯತೆ ಕೊಡಿ ಅಂತ ಕೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now