Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಂಸತ್ ಭವನ ಉದ್ಘಾಟನೆಯಲ್ಲಿ ಪಾಲ್ಗೊಂಡ ಸುಮಲತಾ ಹೇಳಿದ್ದೇನು..?

---Advertisement---

ನವದೆಹಲಿ: ಇಂದು ಸಂಸತ್ ನ ನೂತನ ಭವನ ಉದ್ಘಾಟನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ ಭವನವನ್ನು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ರಾಜ್ಯದ ರಾಜಕೀಯ ನಾಯಕರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿಯಾಗಿ, ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುಮಲತಾ, “ಲೋಕಸಭಾ ಸದಸ್ಯಳಾಗಿ ಇಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ನನ್ನದಾಗಿತ್ತು. ಇದು ನಮ್ಮ ದೇಶಕ್ಕೆ ಐತಿಹಾಸಿಕ ದಿನವಾಗಿದೆ ಹಾಗೂ ನಾನು ಅದರ ಭಾಗವಾಗಿರುವುದಕ್ಕೆ ಹೆಮ್ಮೆಪಡುತ್ತೇನೆ.

ಹೊಸ ಸಂಸತ್ ಕಟ್ಟಡವು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಸಂಸತ್ ಭವನವು ಅತ್ಯಾಧುನಿಕ ಸೌಲಭ್ಯದಿಂದ ಕೂಡಿದ್ದು ಅದು ದೇಶದ ಜನರಿಗೆ ಉತ್ತಮ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಎನ್ನುವ ವಿಶ್ವಾಸ ನನ್ನದು” ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment