Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಣ ಇಲಾಖೆಗೆ ಬಜೆಟ್ ನಿಂದ ಸಿಕ್ಕಿದ್ದೇನು..?

---Advertisement---

ಬೆಂಗಳೂರು; ಇಂದಿನ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಇಲಾಖೆಗೆ ಸಿದ್ದರಾಮಯ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನ ಘೋಷಣೆ‌ ಮಾಡಿದೆ. ಅದರಲ್ಲಿ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

 

* ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಯೋಜನೆ. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

* ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.

* ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.

* ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

* ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು.

* ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.

* ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.

* ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

* ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

* ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡಲಾಗುವುದು.

* ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.

* KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

* ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...