ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು ನೀಡಲಾಗಿದೆ. ಆದರೆ ಜೈನ ನಿಗಮ ಸ್ಥಾಪನೆ ವಿಳಂಬವಾಗಿರುವ ಹಿನ್ನಲೆಯಲ್ಲಿ ಜೈನ ಮುನಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿದ್ದಾರೆ.
ಈ ಸಂಬಂಧ ಹುಬ್ಬಳ್ಳಿಯ ವರೂರಿನಲ್ಲಿ ಮಾತನಾಡಿದ ಜೈನ ಮುನಿ ಗುಣಧರನಂದಿ ಸ್ವಾಮೀಜಿ, ಜೈನ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಸೇರಿದಂತೆ ಒಟ್ಟು ಏಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಈ ಸಂಬಂಧ ಭರವಸೆ ನೀಡಿತ್ತು.
ಆದರೆ ಈವರೆಗೂ ಮೂರು ಬೇಡಿಕೆಗಳನ್ನು ಮಾತ್ರ ಈಡೇರಿಸಿದೆ. ನಿಗಮ ಮಂಡಳಿ ಸೇರಿ ನಾಲ್ಕು ಬೇಡಿಕೆ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ. ನಮ್ಮ ಬೇಡಿಕೆಗಳನ್ನ ನಿರ್ಲಕ್ಷ್ಯ ಮಾಡುತ್ತಲೇ ಬರುತ್ತಿದೆ. ಬುಧವಾರ ಅಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ನಿಗಮ ಮಂಡಳಿ ರಚನೆಗೆ ಮನವಿ ಮಾಡುತ್ತೇವೆ. ಎಲ್ಲಾ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಸರ್ಕಾರ ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ಮಾಡಿದರೆ ಜೂನ್ 8ರಂದು ಐನಾಪುರದಲ್ಲಿ ಸಮಾವೇಶ ಮಾಡುತ್ತೇವೆ. ನಿರ್ಲಕ್ಷ್ಯ ಮುಂದುವರೆಸಿದರೆ ವಿಧಾನಸೌಧದ ಎದುರು ಅನ್ನ, ನೀರು ತ್ಯಜಿಸಿ ಸಲ್ಲೇಖನ ವ್ರತ ಮಾಡುತ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ತಮ್ಮ ಬೇಡಿಕೆಗಳ ಬಗ್ಗೆ ಮಾತನಾಡುವಾಗ ಜೈನ ಮುನಿ ಗುಣಧರನಂದಿ ಅವರ ಕಣ್ಣಲ್ಲಿ ನೀರು ಸುರಿಯುತ್ತಿತ್ತು. ಮನಸ್ಸಿನಲ್ಲಿದ್ದ ನೋವನ್ನ ಹೊರ ಹಾಕಿದರು. ಹಾಗೇ ಸರ್ಕಾರಕ್ಕೂ ಸವಾಲನ್ನ ಹಾಕಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…