Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಠ್ಯಪುಸ್ತಕದ ಬಗ್ಗೆ ನೂತನ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು..?

---Advertisement---

ಬೆಂಗಳೂರು: ಈಗಾಗಲೇ ಶಾಲೆಗಳು ಆರಂಭವಾಗಿದೆ. ಪಠ್ಯ ಪುಸ್ತಕಗಳು ಸರಬರಾಜು ಆಗಬೇಕಿದೆ. ಪರಿಷ್ಕರಣೆ ಬಗ್ಗೆ ನಿಉತನ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಹಂತ ಹಂತವಾಗಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗುವುದು ಎಂದಿದ್ದಾರೆ.

ಹಿಂದಿನ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಸೇರಿಸಿದ್ದ ಮಾಹಿತಿಯನ್ನು ತೆಗೆದು ಹಾಕಬೇಕೆಂದು ಸಾಹಿತಿಗಳು, ಬರಹಗಾರರು ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದರು. ಈ ಮನವಿಗೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದರು. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೇ ಪ್ರಣಾಳಿಕೆಯಲ್ಲಿ ತಿಳಿಸಿದ್ದು, ಹಂತ ಹಂತವಾಗಿ ಪರಿಷ್ಕರಣೆ ಮಾಡುತ್ತೇವೆ. ಮಕ್ಕಳ‌ ಮನಸ್ಸಿಗೆ ಕಲ್ಮಶ ತುಂಬುವ ಯಾವುದೇ ಪಠ್ಯವಿದ್ದರು ಅದನ್ನಿ ಪರಿಷ್ಕರಣೆ ಮಾಡುತ್ತೇವೆ.

ಸಿಎಂ ಮತ್ತು ಡಿಸಿಎಂ ಮಾರ್ಗದರ್ಶನ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ‌. ನಾಳೆ ಶಿವಮೊಗ್ಗದ ಶಾಲೆಯೊಂದಕ್ಕೆ‌ ಭೇಟಿ ನೀಡುತ್ತಿದ್ದು, ಮಕ್ಕಳನ್ನು ನಾನೇ ಸ್ವಾಗತ ಮಾಡುತ್ತೇನೆ. ಪುಸ್ತಕ, ಸಮವಸ್ತ್ರ ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಆಗಲ್ಲ. ಶಿಕ್ಷಣ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...