Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಹುಲ್ ಗಾಂಧಿ ಬಳಿ ಏನ್ ಚರ್ಚೆ ಮಾಡುದ್ರಿ ಸರ್ ಅಂದ್ರೆ : ಡಿಕೆ ಶಿವಕುಮಾರ್ ಏನಂದ್ರು..?

---Advertisement---

ಬೆಂಗಳೂರು: ಸಿಎಂ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಭೇಟಿಗೆ ಹರಸಾಹಸ ಪಡುತ್ತಿದ್ದಾರೆ. ಹಲವು ಬಾರಿ ದೆಹಲಿಗೆ ಹೋಗಿ ಬಂದ್ರು ಕೂಡ, ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಸಿಕ್ಕಿಲ್ಲ. ನಿನ್ನೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹದಿನೈದು ನಿಮಿಷಗಳ ಕಾಲ ಭೇಟಿಯಾಗಿದ್ದರು. ದೆಹಲಿಗೆ ಬರುವಂತೆ ಸೂಚನೆ ಸಿಕ್ಕಿದೆ ಎನ್ನಲಾಗಿತ್ತು. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಕೆಪಿಸಿಸಿ ಅಧೈಕ್ಷ. ರಾಹುಕ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

 

ನೀವೂಗಳು ನಿಮಗೆ ಇಚ್ಛೆ ಬಂದಂತೆ ಗೊಂದಲವನ್ನು ಸೃಷ್ಟಿ ಮಾಡಿಕೊಳ್ಳುತ್ತಿದ್ದೀರಿ. ನಾವುಯ ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನು ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ ಇದನ್ನೇ ಮುಂದುವರೆಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ. ನಾನು ಹೊಸದಾಗಿ ಯಾವುದೇ ಮಾತನ್ನು ಹೇಳುತ್ತಿಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ನಾನು ಅಲ್ಲಿ‌ ಉದ್ಯಮಿಗಳ ಜೊತೆಗೆ ನನ್ನ ಅನುಭವದ ಮಾತುಗಳನ್ನು ಹೇಳಿಕೊಂಡಿದ್ದೇನೆ ಎಂದರು. ದೆಹಲಿಗೆ ತೆರಳುತ್ತಿದ್ದೀರಾ ಎಂದು ಕೇಳಿದಾಗ, ಜ.16ರಂದು ದೆಹಲಿಗೆ ತೆರಳುತ್ತಿದ್ದೇನೆ ಎಂದು ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಹೇಳಿಕೆಯನ್ನ ಡಿಕೆ ಶಿವಕುಮಾರ್ ಅವರೇ ಟ್ವೀಟ್ ಮಾಡಿದ್ದರು. ಅದಕ್ಕೆ ಉತ್ತರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now