ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು ಮತ್ತು ಕನ್ನಡದ ನಟ, ನಟಿಯರು, ಮಾಡೆಲ್ ಗಳು, ಡಿಜೆಗಳು ಪತ್ತೆಯಾಗಿದ್ದರೆ. ಸಿಸಿಬಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.
ಕಾನ್ ಕಾರ್ಡ್ ಮಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲೀಕತ್ವದ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತ ಬರ್ತ್ ಡೇ ಪಾರ್ಟಿ ಹೆಸರಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ತಡರಾತ್ರಿ 3 ಗಂಟೆಯಾದರೂ ಅಂತ್ಯವಾಗಿರಲಿಲ್ಲ. ನಿಯಮ ಉಲ್ಲಂಘಿಸಿ, ಅವಧಿ ಮೀರಿ ಪಾರ್ಟಿ ಮಾಡಲಾಗಿತ್ತು. ಆದ್ದರಿಂದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಕೂಡ ಪತ್ತೆಯಾಗಿದೆ. ಸಿಸಿಬಿ ಪೊಲೀಸರ ದಾಳಿ ವೇಳೆ 17 ಎಂಡಿಎಂಎ ಮಾತ್ರೆಗಳು, ಕೊಕೇನ್ ಕಂಡು ಬಂದಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂಬುದು ತಿಳಿದು ಬಂದಿದೆ.
ಇನ್ನು ಈ ಪಾರ್ಟಿಯಲ್ಲಿ ಶಾಸಕರೊಬ್ಬರ ಪಾಸ್ ಕೂಡ ಕಂಡು ಬಂದಿದೆ. ಆಂಧ್ರ ಮೂಲದ ಕಾಕನಿ ಶಾಸಕ ಗೋವರ್ಧನ ರೆಡ್ಡಿ ಹೆಸರಿನ ಪಾಸ್ ಅದಾಗಿದೆ. ಮರ್ಸಿಡಿಸ್, ಬೆನ್ಜ್, ಜಾಗ್ವಾರ್, ಆಡಿ ಕಾರು ಸೇರಿದಮನತೆ ಹದಿನೈದಕ್ಕೂ ಹೆಚ್ಚು ಐಷರಾಮಿ ಕಾರುಗಳು ಕಂಡು ಬಂದಿವೆ. 30-50 ಲಕ್ಷ ಖರ್ಚು ಮಾಡಿ ಈ ಪಾರ್ಟಿ ಆಯೋಜನೆಗೆ ಖರ್ಚಾಗಿತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…
ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…
ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…