Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಳಗಾವಿ ಅಧಿವೇಶನ ಆರಂಭ : ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಏನಂದ್ರು ಹೊರಟ್ಟಿ..?

---Advertisement---

ಬೆಳಗಾವಿ: ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 157ನೇ ಅಧಿವೇಶನ ನಡೆಯುತ್ತಿದೆ. ಪ್ರತಿಸಲದ ಅಧಿವೇಶನದ ಸಮಯದಲ್ಲೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಾ ಎಂಬ ನಿರೀಕ್ಷೆಯಮ್ನ ಇಟ್ಟುಕೊಳ್ಳಲಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಮಾಹಿತಿ ನೀಡಿದ್ದಾರೆ.

 

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ ಚರ್ಚೆಯಾಗಿದ್ದು, 19 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 151ನೇ ಅಧಿವೇಶನದಲ್ಲಿ 1 ಗಂಟೆ 40 ನಿಮಿಷ ಚರ್ಚೆಯಾಗಿದ್ದು 6 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 154ನೇ ಅಧಿವೇಶನದಲ್ಲಿ 5 ಗಂಟೆ 12 ನಿಮಿಷ ಚರ್ಚೆಯಾಗಿದ್ದು, 11 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. ಅದೇ ರೀತಿ ಈ ಬಾರಿಯ ಅಧಿವೇಶನದಲ್ಲಿ ಸಹ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ‌ ಕಲ್ಪಿಸಲಾಗುವುದು.

 

ಪ್ರತಿ ಬುಧವಾರ ಮತ್ತು ಗುರುವಾರ ನಡೆಯುವ ಇಡೀ ದಿನದ ಕಲಾಪದಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಶೂನ್ಯ ವೇಳೆ ಇದ್ಯಾವುದಕ್ಕು ಅವಕಾಶ ನೀಡದೇ ಕೃಷ್ಣಮೇಲ್ದಂಡೆ ಯೋಜನೆ, ಮಹಾದಾಯಿ, ಕಳಸಾ ಬಂಡೂರಿ ಯೋಜನೆಗಳ ಅನುಷ್ಠಾನದ ಬಗ್ಗೆ, ಅರಣ್ಯಭೂಮಿ ಅತೀಕ್ರಮಣ, ಸಂತ್ರಸ್ಥರ ಸಮಸ್ಯೆ ಹಾಗೂ ಪರಿಹಾರೋಪಾಯಗಳು., ಉತ್ತರ ಕರ್ನಾಟಕ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಪರಿಹಾರಗಳು ಮತ್ತು ಉದ್ಯೋಗ ಸೃಷ್ಠಿಗೆ ಕ್ರಿಯಾಯೋಜನೆ ವಿಷಯಗಳ‌ ಮೇಲೆ ಅಂದು ಇಡೀ ದಿನ ಚರ್ಚೆಗೆ ಅವಕಾಶ ನೀಡಲಾಗುವುದು. ಚರ್ಚೆ ಪೂರ್ಣವಾಗುವವರೆಗೆ ಸದನವನ್ನು ಮುಂದೂಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
157ನೇ ಪರಿಷತ್ ಅಧಿವೇಶನದಲ್ಲಿ 10 ದಿನಗಳನ್ನು ಉಪವೇಶನದ ದಿನಗಳೆಂದು ನಿಗದಿಪಡಿಸಲಾಗಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...