in

ಚುನಾವಣಾ ಅಖಾಡದಲ್ಲಿ ದೊಡ್ಡಗೌಡರ ಸೊಸೆಯರು : ಸ್ಪರ್ಧಿಸುವ ಬಗ್ಗೆ ಅನಿತಾ ಕುಮಾರಸ್ವಾಮಿ ಏನಂದ್ರು..?

suddione whatsapp group join

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪವಿದೆ. ಈಗಾಗಲೇ ಡೇಟ್ ಅನೌನ್ಸ್ ಮಾಡಲಾಗಿದೆ. ಆದರೆ‌ ಜೆಡಿಎಸ್ ನಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಭವಾನಿ ರೇವಣ್ಣ ಪಟ್ಟು ಹಿಡಿದು ಕೂತಿದ್ದಾರೆ. ಇತ್ತ ಕುಮಾರಸ್ವಾಮಿ ನಾನು ಸ್ಪರ್ಧೆ ಮಾಡಲ್ಲ ಅನ್ನೋದನ್ನ ಕನ್ಫರ್ಮ್ ಮಾಡಿದ್ದಾರೆ.

ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ.

ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ಶ್ರೀ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ @JanataDal_S ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಪೂಜ್ಯ ಶ್ರೀ @H_D_Devegowda ಅವರು & ಶ್ರೀ @hd_kumaraswamy ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ.

ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ.

2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ @JanataDal_S ಪಕ್ಷ, ಪೂಜ್ಯ ಶ್ರೀ @H_D_Devegowda ಅವರು, ಶ್ರೀ @hd_kumaraswamy ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ.

ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ.

ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ.

ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ರಾಮನವಮಿ ಬಳಿಕ ಶುರುವಾದ ಹಿಂಸೆ ಇನ್ನು‌ ನಿಂತಿಲ್ಲ : ಪಶ್ಚಿಮ ಬಂಗಾಳದಲ್ಲಿ ಇಂದು ಮತ್ತೆ ಗಲಾಟೆ..!

ಸಿದ್ದರಾಮಯ್ಯ ಪರ ಡಿಕೆಶಿ ಬ್ಯಾಟಿಂಗ್ : ಎನ್ಡಿಟಿವಿ ವರದಿಗೆ ನಮ್ಮ‌ ಸಿದ್ದರಾಮಯ್ಯ ಏನು ಅಂತ ಗೊತ್ತು ಎಂದಿದ್ದಾರೆ