ಬೆಂಗಳೂರು: ಹಿಜಾಬ್ ಗಲಾಟೆಯ ಬಳಿಕ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪಿಸಲಾಗುತ್ತಿದೆ. ಅದಕ್ಕೆ ಸರ್ಕಾರದಿಂದಾನೇ ಅನುದಾನ ಹೋಗುತ್ತಿದೆ ಎನ್ನಲಾಗಿತ್ತು. ಈ ಸುದ್ದಿ ಬಗ್ಗೆ ಇದೀಗ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದಿಂದಾನೇ ಮುಸ್ಲಿಂ ಕಾಲೇಜು ಸ್ಥಾಪನೆಯಾಗುತ್ತಿದೆ ಎಂಬ ಆರೋಪ ಮಾಡಲಾಗುತ್ತಿದೆ. ಇಂತ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರಕ್ಕೆ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವ ಯಾವುದೇ ಉದ್ದೇಶವಿಲ್ಲ. ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿಯೇ ಪ್ರತ್ಯೇಕ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಅದರ ಶಂಕು ಸ್ಥಾಪನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನೇ ಆಹ್ವಾನ ಮಾಡಲಾಗಿದೆ ಎನ್ನಲಾಗಿದೆ.
ಇನ್ನು ಪ್ರತಿಯೊಂದು ಶಾಲೆಗೂ ಎರಡೂವರೆ ಕೋಟಿ ಅನುದಾನ ಮೀಸಲಿಡಲಾಗಿದೆ. ವಕ್ಫ್ ಮಂಡಳಿ ಕಾಲೇಜುಗಳ ನಿರ್ಮಾಣವನ್ನು ಮುಂದೆ ನಿಂತು ಮಾಡುತ್ತೆ ಎನ್ನಲಾಗಿದೆ. ಈ ವಿಚಾರಕ್ಕೆ ಈಗಾಗಲೇ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.