ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರ ಇಂದಿ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.
* ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ. ಅದಕ್ಕಾಗಿ 320 ಕೋಟಿ ರೂ. ಅನುದಾನ.
* ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ.
* ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.
* ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ.
* ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳ ಸ್ಥಾಪನೆ
* 2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳ ಅನುಷ್ಠಾನ
* ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
* ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.
* ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.
* ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ.
* 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…