Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಬಜೆಟ್ ನಲ್ಲಿ ಯಾವುದಕ್ಕೆಲ್ಲಾ ಹೆಚ್ಚಿನ ಒತ್ತು ಕೊಡಲಾಗಿದೆ..?

---Advertisement---

 

ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಎಲ್ಲರ‌ ಚಿತ್ತ ನೆಟ್ಟಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿದ ಮೇಲೆ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಯಾವುದಕ್ಕಲ್ಲ ಈ ಬಾರಿಯ ಬಜೆಟ್ ನಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂಬುದನ್ನು ನೋಡೋಣಾ.

ರಾಜ್ಯ ಸರ್ಕಾರದ ಸಹಯೋಗದಿಂದ ಕೃಷಿ ಅಭಿವೃದ್ಧಿಯಾಗುತ್ತಿದೆ. ಆರು ಕೋಟಿ ರೈತರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸಿದೆ. ಕಿಸಾನ್ ಕಾರ್ಡ್ ಮೂಲಕನಾನ್ನದಾತರ ಪರವಾಗಿ ನಿಂತಿದೆ ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.

* ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

* MSME ಹೆಚ್ಚಳಕ್ಕೂ ಬಜೆಟ್ ನಲ್ಲಿ ಹೆಚ್ಚಿನ ಒತ್ತು

* ವಿಕಸಿತ ಭಾರತಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಒತ್ತು

* ಕೃಷಿ ಕ್ಷೇತ್ರ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆಗೆ ಒತ್ತು

* ನಗರ ಅಭಿವೃದ್ಧಿ, ಇಂಧನ, ಮೂಲಸೌಕರ್ಯ

* ಬಡತನ ನಿರ್ಮೂಲನೆ, ಕೃಷಿಯಲ್ಲಿ ರೈತರ ಏಳಿಗೆ

* ಸಂಶೋಧನೆ ಸೇರಿ ಹಲವು ಕ್ಷೇತ್ರಗಳಿಗೆ ಒತ್ತು

* ಒಟ್ಟು ಒಂಭತ್ತು ಅಂಶಗಳಿಗೆ ಈ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ

* ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ

* ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತು

* ತರಕಾರಿ ಬೆಳೆಗಳ ಉತ್ತೇಜನಕ್ಕಾಗಿ ರೈತರಿಗೆ ಸಹಾಯ

* ಗ್ರಾಮೀಣ ಭಾಗದಲ್ಲಿ ಆರ್ಥಕತೆಗೆ ಹೆಚ್ಚಿನ ಒತ್ತು

* ಉದ್ಯೋಗ ಸೃಷ್ಟಿಗಾಗಿ ಮೂರು ಕೌಶಲ್ಯ ಜಾರಿಗೆ

* ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

* ಉನ್ನತ ಶಿಕ್ಷಣಕ್ಕೆ ಹತ್ತು ಲಕ್ಷದವರೆಗೂ ಸಾಲ ಸೌಲಭ್ಯ

* ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...