Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಲೋಕಸಭಾ ಆಫರ್ ಗೆ ನಟ ಶಿವರಾಜ್ ಕುಮಾರ್ ಏನಂದ್ರು..?

---Advertisement---

ಬೆಂಗಳೂರು: ಇಂದು ನಗರದ ಅರಮನೆ ಮೈದಾನದಲ್ಲಿ ಬೃಹತ್ ಮಟ್ಟದ ಈಡಿಗ ಸಮುದಾಯದ ಸಮಾವೇಶ ನಡೆದಿದೆ. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಧು ಬಂಗಾರಪ್ಪ ಸೇರಿದಂತೆ ರಾಜಕಾರಣಿಗಳು ಭಾಗಿಯಾಗಿದ್ದರು. ನಟ ಶಿವರಾಜ್ಕುಮಾರ್ ಕೂಡ ಸಮಾವೇಶಕ್ಕೆ ಆಗಮಿಸಿದ್ದರು. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಶಿವಣ್ಣನಿಗೆ ಲೋಕಸಭಾ ಚುನಾವಣೆಯ ಆಫರ್ ನೀಡಿದ್ದರು.

 

ತುಂಬಿದ ವೇದಿಕೆಯಲ್ಲಿ ಡಿಸಿಎಂ ಓಪನ್ ಆಫರ್ ನೀಡಿದಾಗ ಶಿವಣ್ಣ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳು ಮೂಡಿದ್ದವು. ಈಗಾಗಲೇ ಶಿವಣ್ಣ ಪತ್ನಿ ಗೀತಾ, ಭಾಮೈದ ಮಧು ಬಂಗಾರಪ್ಪ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ಶಿವಣ್ಣ ಏನಾದರೂ ರಾಜಕೀಯಕ್ಕೆ ಬರಬಹುದಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೀಗ ಆ ಆಫರ್ ಗೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

 

‘ನಮ್ಮ ತಂದೆ ಕೊಟ್ಟ ಬಳುವಳಿ ಬಣ್ಣ ಹಚ್ಚೋದು ಮಾತ್ರ. ಗೀತಾ ಶಿವರಾಜ್ ಕುಮಾರ್ ನಿಲ್ಲುತ್ತಾರೆ. ಹೆಂಡತಿ ಆಸೆ ಪಟ್ಟಾಗ ಗಂಡ ನೆರವೇರಿಸುವುದು ಕರ್ತವ್ಯ. ಚುನಾವಣೆಗೆ ನಾನು ನಿಲ್ಲಲ್ಲ’ ಎಂದು ಡಿಸಿಎಂ ಕೊಟ್ಟ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಇಂದು ನಡೆದ ಸಮಾವೇಶದ ವೇದಿಕೆಯಲ್ಲಿ ಶಿವಣ್ಣನುಗೆ ಟಿಕೆಟ್ ಆಫರ್ ಮಾಡಿದ್ದರು. ಲೋಕಸಭೆಗೆ ರೆಡಿಯಾಗಪ್ಪ ಎಂದು ಹೇಳಿದ್ದೆನೆ. ಯಾವ ಕ್ಷೇತ್ರ ಕೇಳಿದರೂ ಆ ಕ್ಷೇತ್ರದಿಂದ ಟಿಕೆಟ್ ನೀಡುತ್ತೇನೆ. ಸಿನಿಮಾ ಯಾವಾಗ ಬೇಕಾದರೂ ಮಾಡಬಹುದು.‌ಆದರೆ ಪಾರ್ಲಿಮೆಂಟ್ ಗೆ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದರು. ಆದರೆ ಡಿಸಿಎಂ ಆಫರ್ ಅನ್ನು ಶಿವಣ್ಣ ತಿರಸ್ಕರಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment