Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಕೆ ಹರಿಪ್ರಸಾದ್ ಗೋದ್ರಾ ಹೇಳಿಕೆಗೆ ಸತೀಶ್ ಜಾರಕಿಹೊಳಿ ಏನಂದ್ರು..?

---Advertisement---

 

ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಮಯ ನಿಗದಿಯಾಗಿದೆ. ಈ ಸಂದರ್ಭದಲ್ಲಿ ಬಿಕೆ ಹರಿಪ್ರಸಾದ್ ಗೋಧ್ರಾ ಘಟನೆಯನ್ನು ನೆನೆದಿದ್ದಾರೆ. ಈ ವಿಚಾರ ಬಿಜೆಪಿ ನಾಯಕರಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.

ಮತ್ತೊಂದು ಗೋಧ್ರಾ ಘಟನೆ ನಡೆಯುತ್ತದೆ ಎಂಬ ಬಿಕೆ ಹರಿಪ್ರಸಾದ್ ಮಾತಿಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಹೇಳಿರುವುದು ಆ ರೀತಿ ಆಗಬಾರದು ಎಂದು. ಎಲ್ಲಾ ರಾಜ್ಯದಲ್ಲೂ ಆದ ರೀತಿಯಲ್ಲಿ ಆಗಬಾರದು ಎಂದು. ಎಲ್ಲಾ ಜಾಗೃತಿ ವಹಿಸಬೇಕೆಂದು ಆ ರೀತಿ ಮಾತನಾಡಿದ್ದಾರೆ. ಆಯಾ ಸರ್ಕಾರಗಳು ಮುನ್ನೆಚ್ಚರಿಕೆ ವಹಿಸಿ ಎಂದು ಹೇಳಿರುವುದರಲ್ಲಿ ತಪ್ಪೇನು ಇಲ್ಲ ಎಂದಿದ್ದಾರೆ‌.

ಕೆಲವೊಂದು ಕಡೆ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ನೋಡಿಕೊಳ್ಳುವುದು ಸಹ ಪೊಲೀಸರಿಗೆ ಬಿಟ್ಟಿದ್ದು. ಆ ರೀತಿಯಲ್ಲಿ ಹೇಳಿರಬಹುದು ಎಂಬುದು ನನ್ನ ಅಭಿಪ್ರಾಯ. ಒಡಿಶಾದಲ್ಲಿ ಆದಾಗ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಅದನ್ನ ಒಡಿಶಾ ಸರ್ಕಾರದವರು ಆಕ್ಷನ್ ತೆಗೆದುಕೊಳ್ಳಬೇಕು‌. ಬೇರೆ ಬೇರೆ ರಾಜ್ಯದಲ್ಲಿ ಆದಾಗ ಆಯ ರಾಜ್ಯ ಸರ್ಕಾರ ಆಕ್ಚನ್ ತೆಗೆದುಕೊಳ್ಳಬೇಕು. ಜನವರಿ 22 ಆಗುವ ತನಕ ಬಹಳ ಎಚ್ಚರಿಕೆವಹಿಸಬೇಕು. ಎಲ್ಲಾ ಕಡೆಯಿಂದಾನು ಬಹಳಷ್ಟು‌ ಜನ ಅಲ್ಲಿಗೆ ಹೋಗುತ್ತಾರೆ. ನಿಗಾ ವಜಿಸಬೇಕಾದ ಜವಬ್ದಾರಿ ಸರ್ಕಾರಗಳದ್ದೇ ಎಂದಿದ್ದಾರೆ.

ಯಾರ ಮೇಲೆ ಕೇಸು ಇರುತ್ತದೋ ಅವರನ್ನಷ್ಟೇ ಅರೆಸ್ಟ್ ಮಾಡುವುದಕ್ಕೆ ಸಾಧ್ಯ. ಬೇರೆಯವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಸಾಧ್ಯವಾ..? ಅನಾವಶ್ಯಕವಾಗಿ ಯಾರಿಗೆ ಮಾಡುವುದಕ್ಕೆ ಸಾಧ್ಯ. ಅದನ್ನು ರಾಜಕೀಕರಣಗೊಳಿಸುವ ಅಗತ್ಯವಿಲ್ಲ. ಪೊಲೀಸರು ಕೇಸ್ ಹಾಕಿದ್ದಾರೆ. ನ್ಯಾಯಾಲಯದಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment